August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ವ್ಯಾಟಿಕನ್ ಗೆ

ಭಾರತ ಸರಕಾರದ ಪರವಾಗಿ ಸಂತಾಪ ಸೂಚಿಸಲು ಹಾಗೂ ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು, ಭಾರತದ ಅಧಿಕೃತ ಪ್ರತಿನಿಧಿಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಪ್ರಿಲ್ 25 ಹಾಗೂ 26ರಂದು ವ್ಯಾಟಿಕನ್ ಸಿಟಿಯಲ್ಲಿ ಇರುತ್ತಾರೆ. ಏಪ್ರಿಲ್ 26 ರಂದು, ವ್ಯಾಟಿಕನ್ ಸಿಟಿಯ ಸೈಂಟ್ ಪೀಟರ್ಸ್ ಸ್ಕ್ವೇರ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯ ಬಲಿಪೂಜೆಯಲ್ಲಿ ವಿಶ್ವದಾದ್ಯಂತದ ಗಣ್ಯರ ಜೊತೆಗೆ ರಾಷ್ಟ್ರಪತಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಜನರ ಮೇಲಿನ ಅವರ ಪ್ರೀತಿಯನ್ನು ಸದಾ ನೆನಪಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಅವರು ಏಪ್ರಿಲ್ 22 ರಂದು ನವದೆಹಲಿಯಲ್ಲಿರುವ ಅಪೋಸ್ಟೋಲಿಕ್ ನನ್ಸಿಯೇಚರ್ (ಭಾರತದಲ್ಲಿನ ವ್ಯಾಟಿಕನ್ ರಾಯಭಾರ ಕಚೇರಿ)ಗೆ ಭೇಟಿ ನೀಡಿ ಸಂತಾಪ ಸೂಚಕ ಪುಸ್ತಕಕ್ಕೆ ಸಹಿ ಹಾಕಿದ್ದರು.

ಪೋಪ್ ಫ್ರಾನ್ಸಿಸ್ ಅವರ ನಿಧನದ ಹಿನ್ನೆಲೆಯಲ್ಲಿ ಭಾರತವು ಮೂರು ದಿನಗಳ ಶೋಕಾಚರಣೆಯನ್ನೂ ಘೋಷಿಸಿತ್ತು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page