November 7, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಮೇ 5ರ ತನಕ ನಿಷೇಧಾಜ್ಞೆ ಜಾರಿ

ನಿನ್ನೆ ಮೇ 1ರಂದು ಗುರುವಾರ ರಾತ್ರಿ ದುಷ್ಕರ್ಮಿಗಳು ಸುಹಾಸ್ ಶೆಟ್ಟಿ ಎಂಬಾತನನ್ನು ಮಾರಕಾಯಧಗಳಿಂದ ಹಲ್ಲೆ ನಡೆಸಿ, ಕೊಲೆ ಮಾಡಿದ್ದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊತ್ತಿಕೊಳ್ಳಲಾಗಿದೆ. ಗುರುವಾರ ರಾತ್ರಿ 8:30ರ ಸುಮಾರಿಗೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕಿನ್ನಿಪದವು ಕ್ರಾಸ್ ಬಳಿ 5-6 ದುಷ್ಕರ್ಮಿಗಳು ಗಂಭೀರವಾಗಿ ಗಾಯಗೊಳಿಸಿದ ಸುಹಾಸ್ ಶೆಟ್ಟಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಆತ ಮೃತಪಟ್ಟಿರುತ್ತಾನೆ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಲು, ಹಲವು ತಂಡಗಳನ್ನು ರಚಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಭಾಗದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ನಾಕಾಬಂದಿ ಮಾಡಿ ವಾಹನ ತಪಾಸಣೆ ನಡೆಸಲಾಗುತ್ತಿದೆ.

ಪ್ರಕ್ಷುಬ್ದ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲುಕಿನಾದ್ಯಂತ ಭಾರತೀಯ ನಾಗರಿಕ ಸುರಕ್ಷ ಸಂಹಿತೆ 2023ರ ಕಲಂ 163ರ ಅಡಿ ಮೇ 2ರಿಂದ ಮೇ 5ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜ್ಯಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಕೃತ್ಯ ಎಸಗುವುದು ಅಥವಾ ಎಸಗಲು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ದೈಹಿಕವಾಗಿ ಹಿಂಸೆಯನ್ನು ಉಂಟು ಮಾಡುವ ಯಾವುದೇ ಕತ್ತಿ, ದೊಣ್ಣೆ, ಶಸ್ರಗಳು, ಗದಗಳು, ಈಟಿಗಳನ್ನು ಹೊಂದುವುದನ್ನು ಅಥವಾ ಒಯ್ಯುವುದನ್ನೂ ನಿಷೇಧಿಸಲಾಗಿದೆ. ಪ್ರಚೋದನಕಾರಿ ಭಾಷಣ ಘೋಷಣೆ ಪ್ರತಿಭಟನೆ ನಿಂದನೆ ಸಂಪೂರ್ಣವಾಗಿ ಸಲ್ಲದು.

ಸುಹಾಸ್ ಶೆಟ್ಟಿ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 4 ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 1 ಹೀಗೆ ಐದು ಪ್ರಕರಣಗಳು ದಾಖಲಾಗಿತ್ತು. ಈ ಪೈಕಿ ಬಜೆಪೆ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಖುಲಾಸೆ ಆಗಿದೆ. ಫಾಜಿಲ್ ಕೊಲೆ ಪ್ರಕರಣ ಹಾಗೂ ಇನ್ನೊಂದು ಪ್ರಕರಣ ವಿಚಾರಣಾ ಹಂತದಲ್ಲಿದೆ. ಬೆಳ್ತಂಗಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಶಿಕ್ಷೆಯಾಗಿದೆ.

You may also like

News

ಮಂಗಳೂರು CCB ಪೊಲೀಸರ ಕಾರ್ಯಾಚರಣೆ – ಇಬ್ಬರ ಬಂಧನ

ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸರಬರಾಜು ನಿಷೇದಿತ ಮಾದಕ ವಸ್ತುವಾದ MDMA ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು
News

ಮಹಮ್ಮದ್ ಶರೀಫ್ ರವರಿಗೆ ಕರ್ನಾಟಕ ರತ್ನಶ್ರೀ ಪ್ರಶಸ್ತಿ

ಸರ್ಕಾರಿ ಶಾಲೆಗಳಿಗೆ ಉಚಿತ ತರಕಾರಿ ನೀಡಿ ಮಾನವೀಯತೆ ಮೆರೆದ ಮೆಲ್ಕಾರಿನ ವ್ಯಾಪಾರಿ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಗಳನ್ನು ನೀಡಿ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದತ್ತ ಅನನ್ಯ ಸೇವೆ

You cannot copy content of this page