September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

SSLC ಪರೀಕ್ಷೆಯಲ್ಲಿ 614 ಅಂಕ ಪಡೆದು ಪುತ್ತೂರಿನ ಸುದಾನ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿ ಶರಲ್ ರೀಮಾ ಮಾರ್ಟಿಸ್

ಶುಭ ಹಾರೈಸಿದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ

ಪುತ್ತೂರಿನ ಸುದಾನ ಶಾಲೆಯ ವಿದ್ಯಾರ್ಥಿನಿ ಶರಲ್ ರೀಮಾ ಮಾರ್ಟಿಸ್ SSLC ಪರೀಕ್ಷೆಯಲ್ಲಿ 614 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿ ಪುತ್ತೂರಿನ ಸುದಾನ ಆಂಗ್ಲ ಮಾಧ್ಯಮ ಶಾಲೆಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾಳೆ. ಇವಳು ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಇದರ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ – ಪೆರಾಜೆ ಇಲ್ಲಿನ ಶಿಕ್ಷಕಿ ರಶ್ಮಿ ಕಿರಣ್ ಫೆರ್ನಾಂಡಿಸ್ ದಂಪತಿಗಳ ಪುತ್ರಿ.

 

ಇವಳ ಸಾಧನೆಗೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ವಿಟ್ಲ ವಲಯ ಅಧ್ಯಕ್ಷ ರೋಷನ್ ಬೊನಿಫಾಸ್ ಮಾರ್ಟಿಸ್, ಸೂರಿಕುಮೇರು ಬೊರಿಮಾರ್ ಘಟಕ ಅಧ್ಯಕ್ಷ ತೊಮಸ್ ಲಸ್ರಾದೊ, ಸೂರಿಕುಮೇರು ಬೊರಿಮಾರ್ ಚರ್ಚ್ ಇದರ ಪಾಲನಾ ಸಮಿತಿಯ ಕಾರ್ಯದರ್ಶಿ ಸ್ಟೀವನ್ ಆಲ್ವಿನ್ ಪಾಯ್ಸ್, ಆಯೋಗಗಳ ಸಂಯೋಜಕ ಎಲಿಯಾಸ್ ಪಿರೇರಾ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕೆ. ಮಾಣಿ, ಬಾಲಕೃಷ್ಣ ಆಳ್ವ ಕೊಡಾಜೆ, ರಮಣಿ, ಮಾಜಿ ಉಪಾಧ್ಯಕ್ಷೆ ಪ್ರೀತಿ ಲ್ಯಾನ್ಸಿ ಪಿರೇರಾ, ಸದಸ್ಯರಾದ ತೋಟ ನಾರಾಯಣ ಶೆಟ್ಟಿ, ಮಿತ್ರಾಕ್ಷಿ, ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ ಮಾಣಿ, ಉಪಾಧ್ಯಕ್ಷ ತನಿಯಪ್ಪ ಗೌಡ ಹಾಗೂ ಸದಸ್ಯರು ಮತ್ತು ಚಲನಚಿತ್ರ ನಟ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರೆಲ್ಲರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಹಾಗೂ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದ್ದಾರೆ.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page