September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಾಯಗೊಂಡ ನೌಶಾದ್ ರನ್ನು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜರವರು ಆಸ್ಪತ್ರೆಯಲ್ಲಿ ಭೇಟಿ – ಪರಿಹಾರದ ಭರವಸೆ

ಮೇ 2ರಂದು ಶುಕ್ರವಾರ ರಾತ್ರಿ 3:30 ಗಂಟೆಗೆ ಕಣ್ಣೂರು ನಿವಾಸಿ ನೌಶಾದ್ ಎಂಬುವರಿಗೆ ಚೂರಿ ಇರಿತದಿಂದ ಗಂಭೀರ ಗಾಯಗಳಾಗಿತ್ತು. ಅವರು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದೇಶಿ ಪ್ರವಾಸದಲ್ಲಿದ್ದ MLC ಐವನ್ ಡಿಸೋಜರವರು ಇಂದು ಮೇ 4ರಂದು ಆದಿತ್ಯವಾರ ಮಂಗಳೂರಿಗೆ ಆಗಮಿಸಿದ ದಿನದಂದೇ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೌಶಾದ್ ರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಸರಕಾರದಿಂದ ಸಿಗುವ ಪರಿಹಾರವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕೂಡಲೇ ಒದಗಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಅಶ್ರಫ್ ಬಂದರ್, ಇಮ್ರಾನ್ ಕುದ್ರೋಳಿ, ಸಲೀಂ, ಸಲೀಹ್ ಬಜ್ಪೆ, ನವಾಜ್ ಜೆಪ್ಪು, ಹಬೀಬುಲ್ಲಾ ಕಣ್ಣೂರು, ಮಾಜಿ ಮನಪಾ ಸದಸ್ಯರು ಬಾಸ್ಕರ್ ರಾವ್, ನಜೀರ್ ಬಜಾಲ್ ಹಾಗೂ ಇತರರು ಉಪಸ್ಥಿತರಿದ್ದರು.

You may also like

News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ
News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.

You cannot copy content of this page