November 7, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಳೆ ಮೇ 7ರಂದು ಸೂರಿಕುಮೇರು ಚರ್ಚ್ ನಲ್ಲಿ ನೂತನ ಧರ್ಮಗುರು ಫಾದರ್ ಸ್ಟ್ಯಾನಿ ಪಿಂಟೊ ಇವರ ಪ್ರಥಮ ಕೃತಜ್ಞತಾ ದಿವ್ಯ ಬಲಿಪೂಜೆ

ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಬಾಲಯೇಸು ಪುಣ್ಯ ಕ್ಷೇತ್ರದಲ್ಲಿ ಮೇ 2ರಂದು ಶುಕ್ರವಾರ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಫ್ರಾನ್ಸಿಸ್ ಸೆರಾವೊ ಇವರಿಂದ ಗುರುದೀಕ್ಷೆ ಪಡೆದ ಫಾದರ್ ಸ್ಟ್ಯಾನಿ ಲಿಸ್ಟನ್ ಪಿಂಟೊ OCD ಇವರು ನಾಳೆ ಮೇ 7ರಂದು ಬುಧವಾರ ಬೆಳಗ್ಗೆ 10:00 ಗಂಟೆಗೆ ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಕುಟುಂಬದ ಸದಸ್ಯರೊಂದಿಗೆ ಪ್ರಥಮ ಕೃತಜ್ಞತಾ ಬಲಿಪೂಜೆಯನ್ನು ನಡೆಸಲಿರುವರು.

ಈ ಪವಿತ್ರ ಕಾರ್ಯಕ್ರಮಕ್ಕೆ ಮಂಗಳೂರು ಧರ್ಮಕ್ಷೇತ್ರದ ಧರ್ಮಗುರುಗಳು, ಕಾರ್ಮೆಲೈಟ್ ಸಂಸ್ಥೆಯ ಧರ್ಮಗುರುಗಳು, ವಿವಿಧ ಧರ್ಮಕ್ಷೇತ್ರದ ಧರ್ಮಗುರುಗಳು, ಧರ್ಮಭಗಿನಿಯರು ಹಾಗೂ ಭಕ್ತಾಧಿಗಳು ಪಾಲ್ಗೊಳ್ಳಲಿರುವರು ಎಂದು ಸೂರಿಕುಮೇರು ಬೊರಿಮಾರ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್, ಕಾರ್ಯದರ್ಶಿ ಸ್ಟೀವನ್ ಅಲ್ವಿನ್ ಪಾಯ್ಸ್, ಆಯೋಗಗಳ ಸಂಯೋಜಕರಾದ ಎಲಿಯಾಸ್ ಪಿರೇರಾ ಮತ್ತು ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಅಧ್ಯಕ್ಷ ತೊಮಸ್ ಲಸ್ರಾದೊ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಮಂಗಳೂರು CCB ಪೊಲೀಸರ ಕಾರ್ಯಾಚರಣೆ – ಇಬ್ಬರ ಬಂಧನ

ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸರಬರಾಜು ನಿಷೇದಿತ ಮಾದಕ ವಸ್ತುವಾದ MDMA ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು
News

ಮಹಮ್ಮದ್ ಶರೀಫ್ ರವರಿಗೆ ಕರ್ನಾಟಕ ರತ್ನಶ್ರೀ ಪ್ರಶಸ್ತಿ

ಸರ್ಕಾರಿ ಶಾಲೆಗಳಿಗೆ ಉಚಿತ ತರಕಾರಿ ನೀಡಿ ಮಾನವೀಯತೆ ಮೆರೆದ ಮೆಲ್ಕಾರಿನ ವ್ಯಾಪಾರಿ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಗಳನ್ನು ನೀಡಿ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದತ್ತ ಅನನ್ಯ ಸೇವೆ

You cannot copy content of this page