October 29, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿಯಲ್ಲಿ ಮಹಿಳಾ ಗ್ರಾಮ ಸಭೆ

ಮಹಿಳೆಯರು ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು – ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ

ಮಹಿಳೆಯರ ಮತ್ತು ಮಕ್ಕಳ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಬಹಳಷ್ಷು ಕಾಳಜಿ ವಹಿಸಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯವರು ಹೇಳಿದರು.

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ನಡೆದ ಮಹಿಳಾ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದಿಂದ ದೊರೆಯುವ ಪ್ರತಿಯೊಂದು ಸವಲತ್ತುಗಳು ಕೂಡಾ ಮಹಿಳೆಯರಿಗೇ ಬರುತ್ತವೆ. ಮಹಿಳೆಯರು ಇದರ ಮಹತ್ವವನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ರೇಣುಕಾರವರು ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿ ಪ್ರಮುಖ ಮಾಹಿತಿಯನ್ನು ನೀಡಿದರು. ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತಾ, ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಪ್ರೀತಿ ಡಿನ್ನಾ ಪಿರೇರಾ, ಸೀತಾ, ಮಿತ್ರಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮದ ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ  ಅಧಿಕಾರಿ ಗಿರಿಜಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

You may also like

News

ಸಿ.ಒ.ಡಿ.ಪಿ. ಹಾಗೂ ಬಾಳೆಪುಣಿ ಪ್ರಗತಿ ಮಹಾ ಸಂಘದಿಂದ ದೀಪಾವಳಿ ಆಚರಣೆ

ಮಹಿಳೆಯು ಶಿಕ್ಷಣದ ಬೆಳಕಿನಿಂದ ಬೆಳಗಿದರೆ ಕತ್ತಲೆಗಳು ದೂರ – ಫಾದರ್ ಅಸಿಸ್ಸಿ ಸಿ.ಒ.ಡಿ.ಪಿ. ಮಂಗಳೂರು ಹಾಗೂ ಬಾಳೆಪುಣಿ ಪ್ರಗತಿ ಮಹಾ ಸಂಘದ ಸದಸ್ಯ ಸಂಘಗಳ ವತಿಯಿಂದ ದೀಪಾವಳಿ
News

ಮಾಹಿತಿ ಆಯೋಗದ ಆದೇಶವನ್ನು ಪಾಲಿಸದೆ ನಿರ್ಲಕ್ಷ್ಯ ತೋರಿದ ಕುಣಿಗಲ್ ತಹಶೀಲ್ದಾರ್ ರಶ್ಮಿ ಇವರಿಗೆ ರೂಪಾಯಿ 25,000 ದಂಡ

ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆಗೆ ಶಿಕ್ಷೆ ಮಾಹಿತಿ ಹಕ್ಕು ಕಾಯ್ದೆ (RTI Act) ಅಡಿಯಲ್ಲಿ ಆಯೋಗದ ಆದೇಶವನ್ನು ಪಾಲಿಸದೆ ನಿರ್ಲಕ್ಷ್ಯ ತೋರಿದ ಕುಣಿಗಲ್ ತಾಲ್ಲೂಕಿನ ತಹಶೀಲ್ದಾರ್ ರಶ್ಮಿ

You cannot copy content of this page