August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಮುದ್ವೇಷದ ಭಾಷಣ – ಆರೋಪಿ ಭರತ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬಾ ಗ್ರಾಮದಲ್ಲಿ ಕೋಮುದ್ವೇಶವನ್ನುಂಟು ಮಾಡುವಂತಹ ಭಾಷಣ ಮಾಡಿದ ಪ್ರಕರಣವು ಬೆಳಕಿಗೆ ಬಂದಿದೆ. ಮೇ 15ರಂದು ಸಂಜೆ ಪುತ್ತೂರು ತಾಲೂಕಿನ ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಆರೋಪಿತನಾದ ಭರತ್ ಕುಂಮ್ಡೇಲು ಎಂಬಾತನು ಕೋಮು ದ್ವೇಷವನ್ನು ಉಂಟುಮಾಡುವಂತಹ ಭಾಷಣವನ್ನು ಮಾಡಿರುವುದಾಗಿದೆ.

ಆರೋಪಿಯ ಕೋಮು ದ್ವೇಷದ ಮಾತುಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆಗಳಿರುವುದರಿಂದ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಲಾಗುತ್ತದೆ.

ನಾಳೆ ಮಂಗಳೂರಿಗೆ ಆಗಮಿಸುತ್ತಿರುವ ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಜ್ಞಾವಂತ ನಾಗರಿಕರು ಭೇಟಿಯಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದವನ್ನು ನಿಯಂತ್ರಿಸಲು ಲಿಖಿತ ಮನವಿ ಮಾಡಲಿದ್ದಾರೆ – ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಈ ದ್ವೇಷ ಭಾಷಣವೂ ಪ್ರಮುಖ ವಿಷಯವಾಗಲೂಬಹುದು ಎನ್ನಲಾಗಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page