August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಪರಿಚಿತರಿಂದ ತಲವಾರು ಹಲ್ಲೆ – ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು

SP ಹಾಗೂ ಪಶ್ಚಿಮ ವಲಯ DIGP ಹಲ್ಲೆ ನಡೆದ ಸ್ಥಳಕ್ಕೆ ಭೇಟಿ

ಮೇ 16ರಂದು ಶುಕ್ರವಾರ ಸಾಯಂಕಾಲ ಸುಮಾರು 7.45 ಗಂಟೆಗೆ ಯಾಸಿರ್ ಅರಾಫತ್ ಅವರ ಕ್ಯಾಂಟೀನಿಗೆ ಬಂದ ದೂರದ ಸಂಬಂಧಿ, ಅಬ್ದುಲ್ ಹಮೀದ್ ತಂಪು ಪಾನೀಯ ಕುಡಿದು ಮೊಬೈಲ್ ನಲ್ಲಿ ಮಾತನಾಡಿಕೊಂಡಿದ್ದರು. ಆಗ ಬೈಕಿನಲ್ಲಿ ಅಲ್ಲಿಗೆ ಬಂದ ಇಬ್ಬರು ಅಪರಿಚಿತರು, ಅವರುಗಳ ಪೈಕಿ ಓರ್ವ ತಾನು ತಂದಿದ್ದ ತಲವಾರಿನಿಂದ ಅಬ್ದುಲ್ ಹಮೀದ್ ರವರಿಗೆ ಹಲ್ಲೆ ನಡೆಸಿರುತ್ತಾನೆ. ತಲವಾರಿನಿಂದ ಕಡಿದ ಪರಿಣಾಮ ಎಡಕೈಗೆ ಗಂಬೀರ ಗಾಯವಾಗಿರುತ್ತದೆ. ಗಾಯಗೊಂಡ ಅಬ್ದುಲ್ ಹಮೀದ್ ರವರು ಬೊಬ್ಬೆ ಹಾಕಿ ಅಲ್ಲಿಂದ ದೂರ ಓಡಿದಾಗ ಆರೋಪಿಗಳು ಅದೇ ಬೈಕಿನಲ್ಲಿ ವಾಪಸ್ ಹೋಗಿರುತ್ತಾರೆ.

ಗಾಯಗೊಂಡ ಅಬ್ದುಲ್ ಹಮೀದ್ ರವರನ್ನು ಬಂಟ್ವಾಳದ ಸೋಮಯಾಜಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ. ಪ್ರಕರಣದ ಪಿರ್ಯಾದುದಾರರಾದ ಯಾಸೀರ್ ಅರಾಫತ್, ಪ್ರಾಯ 23 ವರ್ಷ, ವಾಸ: ಜೈನರಪೇಟೆ ಮನೆ, ಪಾಣೆಮಂಗಳೂರು ಗ್ರಾಮ, ಬಂಟ್ವಾಳ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣಾ ಅ.ಕ್ರ : 53/2025 ಕಲಂ:118(1), 351(3), 109 ಜೊತೆಗೆ 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page