ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳು ನೆಲಸಮ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಸುತ್ತೋಲೆ

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಉಲ್ಲೇಖಿತ (1)ರ ಟಿಪ್ಪಣಿಯೊಡನೆ ಲಗತ್ತಿಸಿರುವ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಉಲ್ಲೇಖ (2) ರಲ್ಲಿನ ತೀರ್ಪಿನಲ್ಲಿ, ಅನಧಿಕೃತವಾಗಿ ನಿರ್ಮಿಸುತ್ತಿರುವ ಹಾಗೂ ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ, ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸರ್ಕಾರದ ಮತ್ತು ಸಾರ್ವಜನಿಕ ಸ್ವತ್ತಿನಲ್ಲಿ ನಿರ್ಮಿಸುತ್ತಿರುವ ನಿರ್ಮಿಸಿರುವ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುವ ಮುನ್ನ ಸ್ಥಳೀಯ ಪ್ರಾಧಿಕಾರಗಳು ನಿಯಮಾನುಸಾರ ಅನುಸರಿಸಬೇಕಾದ ಕಾರ್ಯವಿಧಾನಗಳ ಬಗ್ಗೆ ನಿರ್ದೇಶನಗಳನ್ನು ನೀಡಿರುವುದನ್ನು ಪ್ರಸ್ತಾಪಿಸಲಾಗಿರುತ್ತದೆ.

ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಗಳಿಗೆ ನೀಡಿರುವ ನಿರ್ದೇಶನಗಳನ್ನು ಸ್ಥಳೀಯ ಪ್ರಾಧಿಕಾರಗಳು ಮತ್ತು ಇಲಾಖೆಗಳು ಪಾಲಿಸಲು ಸೂಕ್ತ ನಿರ್ದೇಶನ ನೀಡುವಂತೆ ಸದರಿ ಆದೇಶದಲ್ಲಿ ಸರ್ಕಾರಕ್ಕೆ ಸೂಚಿಸಿರುತ್ತದೆ. ಆದುದರಿಂದ ಅಕ್ರಮ ಕಟ್ಟಡಗಳ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಈ ಮೂಲಕ ನಿರ್ದೇಶನ ನೀಡಲಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕಟ್ಟಡಗಳು ಅನುಮೋದಿತ ನಕಾಶೆಯನುಸಾರ ಕಟ್ಟಿರುವ ಬಗ್ಗೆ ಹಾಗೂ ಅದು ವಾಸ ಯೋಗ್ಯ ಎಂದು ದೃಢೀಕರಿಸುವ ಸಂಬಂಧ ಉಲ್ಲೇಖ (4) ರಲ್ಲಿನ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪುಕರಣ 64 ರಲ್ಲಿ ಕಟ್ಟಡ ನಿರ್ಮಾಣ ಹಾಗೂ ನಿಯಂತ್ರಣದ ಬಗ್ಗೆ ಉಪಬಂಧವಿರುತ್ತದೆ. ಕಟ್ಟಡಗಳನ್ನು ನಿರ್ಮಿಸಲು ಸರ್ಕಾರ ಗೊತ್ತುಪಡಿಸಬಹುದಾದ ನಿಯಮಗಳಿಗೊಳಪಟ್ಟು ಸ್ಥಳೀಯ ಗ್ರಾಮ ಪಂಚಾಯತಿಯಿಂದ ಪರವಾನಿಗೆ ಪಡೆಯಬೇಕಾಗಿರುತ್ತದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಟ್ಟಡಗಳನ್ನು ನಿರ್ಮಿಸಲು ಅನುಸರಿಸಬೇಕಾದ ವಿಧಿವಿಧಾನಗಳನ್ನು ರಾಜ್ಯ ಸರ್ಕಾರ ಮಾದರಿ ಉಪ ವಿಧಿಗಳು ಅಂದರೆ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಟ್ಟಡಗಳ ನಿರ್ಮಾಣದ ಮೇಲೆ ಜಿಲ್ಲಾ ಪಂಚಾಯತ್‌ಗಳ, ತಾಲ್ಲೂಕು ಪಂಚಾಯತ್‌ಗಳ ಮತ್ತು ಗ್ರಾಮ ಪಂಚಾಯತ್‌ಗಳ ನಿಯಂತ್ರಣ) ಮಾದರಿ ಉಪವಿಧಿ 2015’ ಜಾರಿಗೊಳಿಸಿದ.

ಗ್ರಾಮ ಪಂಚಾಯಿತಿ ಪರವಾನಿಗೆ ಪಡೆದು ಕಟ್ಟಡ ಯೋಜನೆ ಹಾಗೂ ಅನುಮೋದಿತ ನಕ್ಷೆ ಉಲ್ಲಂಘನೆಯಾಗದಂತೆ ನಿರ್ಮಿಸಿರುವ ಕಟ್ಟಡಗಳನ್ನು ಸ್ಥಳ ಪರಿಶೀಲಿಸಿ, ತಡ ಮಾಡದೆ ಪೂರ್ಣಗೊಂಡ ಪತ್ರ, ವಾಸಯೋಗ್ಯ ಪಮಾಣ ಪತ್ರವನ್ನು ನೀಡತಕ್ಕದ್ದು. ಗ್ರಾಮ ಪಂಚಾಯತಿ ಪರವಾನಿಗೆ ಪಡೆಯದ ಹಾಗೂ ಪರವಾನಿಗೆ ಪಡೆದಿದ್ದರೂ ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ, ನಿರ್ಮಾಣವಾಗುತ್ತಿರುವ ವಸತಿ, ವಾಣಿಜ್ಯ ಹಾಗೂ ಇತರ ಕಟ್ಟಡಗಳ ಕಾಮಗಾರಿಗಳು ಕಂಡು, ಬಂದರೆ, ಅಂತಹ ಕಟ್ಟಡ ಕಾಮಗಾರಿಗಳನ್ನು ತಕ್ಷಣವೇ ನಿಲ್ಲಿಸಲು ಗ್ರಾಮ ಪಂಚಾಯತಿಯು ಕ್ರಮ ಕೈಗೊಳ್ಳಬೇಕು. ಪರವಾನಿಗೆ ಪಡೆದು ನಿರ್ಮಿಸುತ್ತಿರುವ ಕಟ್ಟಡವು ಅನುಮೋದಿತ ನಕ್ಷೆಗಿಂತ ಭಿನ್ನವಾಗಿದ್ದರೆ ಅದನ್ನು ಸರಿಪಡಿಸಲು ನೋಟೀಸ್ ನೀಡಬೇಕು ಹಾಗೂ ಅಂತಹ ಸಲಹೆಯಂತ ಕಟ್ಟಡವನ್ನು ನಿರ್ಮಿಸುತ್ತಿರುವುದನ್ನು ಖಾತರಿಪಡಿಸಿಕೊಳ್ಳಬೇಕು.

ಅನಧಿಕೃತ ಕಟ್ಟಡಗಳನ್ನು ನೆಲಸಮಗೊಳಿಸಲು ಗ್ರಾಮ ಪಂಚಾಯತಿ ನಿಯಮಾನುಸಾರ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ಇಂತಹ ಪುಕ್ರಿಯೆಯಲ್ಲಿ ಸ್ಥಳೀಯ ಕಂದಾಯ ಇಲಾಖೆ, ಪೋಲೀಸರ ನೆರವನ್ನು ಪಡೆಯತಕ್ಕದ್ದು. ಇಂತಹ ಪ್ರಕ್ರಿಯೆಗಳಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸ್ಥಳೀಯ ಗ್ರಾಮ ಪಂಚಾಯತಿಗೆ ಎಲ್ಲಾ ರೀತಿಯ ಸಹಕಾರ ನೀಡುವುದು. ಕಡ್ಡಾಯವಾಗಿರುತ್ತದೆ. ಇಂತಹ ಪ್ರಕ್ರಿಯೆಗಳಲ್ಲಿ ಸಹಕರಿಸದಿದ್ದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಅನಧಿಕೃತ ಕಟ್ಟಡಗಳ ನಿರ್ಮಾಣ ತಿಳಿದಿದ್ದರೂ ಅದರ ವಿರುದ್ಧ ಕ್ರಮ ಕೈಗೊಳ್ಳದ ಸಂಬಂಧಿ ಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದು. ಸಾರ್ವಜನಿಕ ಹಿತಾಸಕ್ತಿಯುಳ್ಳ ಸೃತ್ತಿನಲ್ಲಿ ಕಟ್ಟಡಗಳು ನಿರ್ಮಾಣವಾಗಿದ್ದರೆ ಅವುಗಳನ್ನು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಮಾರ್ಗಸೂಚಿಗಳನ್ವಯ ನೆಲ ಸಮಗೊಳಿಸಬೇಕೆಂದು ಈ ಮೂಲಕ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳಿಗೆ ಸೂಚಿಸಲಾಗಿದೆ.




