August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು

ಸ್ಪೇಸ್ ಜೆಟ್ ಕಂಪನಿ ಉದ್ಯೋಗಿ ಧರ್ಮಸ್ಥಳದ 22 ವರ್ಷ ಪ್ರಾಯದ ಅಕಾಂಕ್ಷ ಎಸ್.ಎನ್. ಪಂಜಾಬ್ ನಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಧರ್ಮಸ್ಥಳ ಗ್ರಾಮದ ಬೊಳಿಯಾರುನ ಅಕಾಂಕ್ಷ ಎಲ್.ಪಿ.ಯು. ಕಾಲೇಜು ಪಂಜಾಬ್ ಪಗುವಾರ ಜಲಂದರ್‌ನಲ್ಲಿ ಕಲಿತು ಸ್ಪೇಸ್ ಜೆಟ್ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಪಂಜಾಬ್‌ನ ಎಲ್.ಪಿ.ಯು. ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ಈಕೆ ಆರು ತಿಂಗಳ ಹಿಂದೆಯಷ್ಟೇ ಏರೋಸ್ಪೇಸ್ ಇಂಜಿನಿಯರ್ ಆಗಿ ದೆಹಲಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಜಪಾನ್‌ಗೆ ಉದ್ಯೋಗಕ್ಕೆ ಹೋಗುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಪಂಜಾಬ್ ಎಲ್.ಪಿ.ಯು. ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು, ಈ ಕುರಿತು ತನ್ನ ಮನೆಯವರಿಗೆ ಕರೆ ಮಾಡಿ ಹೇಳಿದ್ದರು ಎಂದು ತಿಳಿದು ಬಂದಿದೆ.

ಪಂಜಾಬ್‌ನ ಜಲಂದರ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೇ 17 ಶನಿವಾರ ರಾತ್ರಿಯೇ ಮನೆ ಮಂದಿ ಪಂಜಾಬ್‌ಗೆ ತೆರಳಿದ್ದಾರೆ. ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದು ಬಂದಿದೆ ಎಂದು ವರದಿಯಾಗಿದೆ. ಆದರೆ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಆರೋಪ ಕೂಡಾ ಕೇಳಿ ಬಂದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page