September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಬೇಸಿಗೆ ಶಿಬಿರ ಪೂರಕವಾಗವಾಗಲಿದೆ – ಸುದೀಪ್ ಕುಮಾರ್ ಶೆಟ್ಟಿ

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಬೇಸಿಗೆ ಶಿಬಿರ ಪೂರಕವಾಗವಾಗಲಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹೇಳಿದರು. ಮಾಣಿ ಗ್ರಾಮ ಪಂಚಾಯತ್ತಿನ ಅರಿವು ಕೇಂದ್ರದ ವತಿಯಿಂದ ಜರುಗಿದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳ ಜ್ಞಾನದ ಬೆಳವಣಿಗೆಯ ದೃಷ್ಟಿಯಿಂದ ಸರಕಾರ ಹಮ್ಮಿಕೊಳ್ಳುತ್ತಿರುವ ಇಂತಹ ಕಾರ್ಯಕ್ರಮ ಶ್ಲಾಘನೀಯ ಎಂದು ಅವರು ಹೇಳಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಇಬ್ರಾಹಿಂ ಕೆ. ಮಾಣಿ, ನಾರಾಯಣ ಶೆಟ್ಟಿ, ಪ್ರೀತಿ ಡಿನ್ನಾ ಪಿರೇರಾ, ಮಿತ್ರಾಕ್ಷಿ ಭಾಗವಹಿಸಿದ್ದರು. ತರಬೇತುದಾರು ಮತ್ತು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗ್ರಂಥಪಾಲಕಿ ಗೀತಾಶ್ವಿನಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page