September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಂಬೆ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಮಕ್ಕಳ ನರ್ಸಿಂಗ್ ಕುರಿತು ‘ಪೀಡಿಯಾಕಾನ್-2025’ ಪ್ರಾದೇಶಿಕ ಸಮ್ಮೇಳನ – ಪತ್ರಿಕಾಗೋಷ್ಠಿ

ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ವತಿಯಿಂದ ಸ್ವಿಫ್ಟ್ ಹ್ಯಾಂಡ್ಸ್-ಸೇಫ್‌ಗಾರ್ಡಿಂಗ್ ಲಿಟಲ್ ಲೈವ್ಸ್ ಎಂಬ ಧ್ಯೇಯದಡಿ ಪೀಡಿಯಾಕಾನ್-2025 ಎಂಬ ಪ್ರಾದೇಶಿಕ ಸಮ್ಮೇಳನವನ್ನು ಮೇ 24ರಂದು ಬೆಳಗ್ಗೆ 9ರಿಂದ ಕಾಲೇಜಿನ ಫ್ಲೋರೆನ್ಸ್ ನೈಂಟಿಗೇಲ್ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದು, ಮಕ್ಕಳ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ನರ್ಸ್ ಗಳ ಕೌಶಲ್ಯವೃದ್ಧಿಗೆ ಈ ಸಮ್ಮೇಳನ ಪೂರಕವಾಗಲಿದೆ ಎಂದು ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನಿರ್ದೇಶಕ ವಂದನೀಯ ಫಾದರ್ ರಿಚ್ಚರ್ಡ್ ಅಲೋಶಿಯಸ್ ಕುವೆಲ್ಲೊ ಹೇಳಿದರು.

ಅವರು ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನಲ್ಲಿ ಸಮ್ಮೇಳನದ ಆಮಂತ್ರಣ ಬಿಡುಗಡೆಗೊಳಿಸಿ ಮೇ 21ರಂದು ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಮಾರಂಭದಲ್ಲಿ ಸಂಸ್ಥೆಯ ಹೆಲ್ತ್ ಕೇರ್ ಸಿಮ್ಯುಲೇಶನ್ ಎಜ್ಯುಕೇಶನ್‌ನ ಮುಖ್ಯಸ್ಥ ಡಾ| ಲುಲು ಶರೀಫ್ ಮಹ್ಮೂದ್ ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದಾರೆ. ಜತೆಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳು ತುರ್ತು ಪರಿಸ್ಥಿತಿಯಲ್ಲಿ ಮಕ್ಕಳಿಗೆ ಚಿಕಿತ್ಸೆ ನಿರ್ವಹಣೆ, ನವಜಾತ ಶಿಶುಗಳ ಆರೈಕೆ ಮೊದಲಾದ ವಿಚಾರದಲ್ಲಿ ನರ್ಸ್ ಗಳ ವೃತ್ತಿಪರತೆಯನ್ನು ಹೆಚ್ಚಿಸಲು ಉಪನ್ಯಾಸ ನೀಡಲಿದ್ದಾರೆ ಎಂದರು.

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ವಂದನೀಯ ಫಾದರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ ಅವರು ಪ್ರಸ್ತಾವನೆಗೈದರು. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಭಗಿನಿ ಡಾ| ಜೂಡಿ ಅವರು ಸಮ್ಮೇಳನದ ಉದ್ದೇಶಗಳನ್ನು ವಿವರಿಸಿದರು. ಆಯೋಜನಾ ಸಮಿತಿಯ ಜಾನೆಟ್ ಸಿಕ್ವೇರಾ, ಕಾರ್ಯದರ್ಶಿ ಜಾಯ್ಸ್ ಫೆರ್ನಾಂಡಿಸ್, ಮಾಧ್ಯಮ ಸಂಯೋಜಕ ಎಲಿಯಾಸ್ ಫೆರ್ನಾಂಡಿಸ್ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page