October 31, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ವರದಿಗಳ ಅಗತ್ಯವಿದೆ – ಬದ್ರುದ್ಧೀನ್ ಮಾಣಿ

ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ವರದಿಗಳ ಅಗತ್ಯವಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ಧೀನ್ ಮಾಣಿ ತಿಳಿಸಿದ್ದಾರೆ. ಅವರು  ಪತ್ರಿಕಾ ಭವನದಲ್ಲಿ ಇಂದು ಮೇ 24ರಂದು ಶನಿವಾರ 2024ನೆ ಸಾಲಿನ ಪ.ಗೋ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜಯವಾಣಿ ಹಿರಿಯ ಉಪಸಂಪಾದಕ ರಾಜೇಶ್ ಶೆಟ್ಟಿ ದೋಟ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಕಾಲ ಕಳೆದಂತೆ ಪತ್ರಿಕೋದ್ಯಮದ    ಸವಾಲುಗಳು  ಭಿನ್ನವಾಗುತ್ತಾ ಸಾಗಿದೆ. ಈಗ ತಂತ್ರಜ್ಞಾನ ಬೆಳೆದಿದೆ ಎಂದರು. ಪದ್ಯಾಣ ಗೋಪಾಲ ಕೃಷ್ಣರಂತಹ ಹಿರಿಯ ಪತ್ರಕರ್ತರನ್ನು ನೆನಪಿಸಿಕೊಳ್ಳುವುದು ತುಂಬಾ ಅಗತ್ಯ ಕಿರಿಯ ಪತ್ರಕರ್ತರಿಗೆ ಅವರು ನಿಜವಾದ ಮಾರ್ಗದರ್ಶಕರು ಎಂದು ಪರಿಗಣಿಸ ಬೇಕಾಗಿದೆ. ಆಡಳಿತದಲ್ಲಿ ಪಾರದರ್ಶಕವಾಗಿರಬೇಕು. ಭೃಷ್ಟಾಚಾರ ಮುಕ್ತವಾಗಿರಬೇಕು ಎನ್ನುವ ಉದ್ದೇಶದಿಂದ ಮಾಹಿತಿ ಹಕ್ಕು ಕಾಯಿದೆ ಜಾರಿಗೆ ಬಂದಿದೆ. ಇಂತಹ ಕಾಯ್ದೆ ದುರ್ಬಳಕೆ ಆಗಬಾರದು. ಮಾಹಿತಿ ಹಕ್ಕು ಕಾಯಿದೆ ಪತ್ರಕರ್ತರಿಗೆ ಸಾರ್ವಜನಿಕರಿಗೆ  ಒಂದು ಅಸ್ತ್ರ. ಜನರಿಗೆ ನೆರವಾಗಲು ಮಾಹಿತಿ ಹಕ್ಕು ಕಾಯಿದೆ ಒಂದು ವರದಾನ ಈ ನಿಟ್ಟಿನಲ್ಲಿ ಮಾಧ್ಯಮಗಳ ಸಹಕಾರ ಅಗತ್ಯ ಎಂದರು.

ಪ.ಗೋ ಪ್ರಶಸ್ತಿ ಪಡೆದ ರಾಜೇಶ್ ಶೆಟ್ಟಿ  ದೋಟ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನಾನು ಕಂಡ ಸಮಸ್ಯೆಯ ಬಗ್ಗೆ ವರದಿ ಮಾಡಿದೆ. ಅದರಿಂದ ಅಲ್ಲಿನ ಜನರಿಗೆ ದಾರಿ ನಿರ್ಮಾಣವಾಗಲು ಸಾಧ್ಯವಾಯಿತು. ಅದು ನನಗೆ ತೃಪ್ತಿ ತಂದಿದೆ ಎಂದರು. ಮೊರಂಟೆ ಬೈಲು ಪ್ರದೇಶದ ಆದಿವಾಸಿ ಮಕ್ಕಳ ಶಿಕ್ಷಣಕ್ಕೆ  ಪ್ರಶಸ್ತಿಯ  ಮೊತ್ತ ರೂಪಾಯಿ 10 ಸಾವಿರ ನೀಡಲಾಗುತ್ತಿದ್ದು, ಎದುಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಇದರ ಮೋಹದಾಸ್ ಮಾರಕಡ ಅವರಿಗೆ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ವಾರ್ತಾ ಇಲಾಖೆಯ ನಿವೃತ್ತ ಸಿಬ್ಬಂದಿ ವಿಶ್ವನಾಥ ಜೋಗಿಯವರನ್ನು ವೃತ್ತಿ ನಿವೃತ್ತಿಯ ಹಿನ್ನೆಲೆಯಲ್ಲಿ ಗೌರವಿಸಲಾಯಿತು. ಸಮಾರಂಭದಲ್ಲಿ   ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ, ಮಂಗಳೂರು ಸ್ಮಾರ್ಟ್ ಸಿಟಿ ಮಹಾ ಪ್ರಭಂದಕ ಅರುಣ್ ಪ್ರಭ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್, ಮಂಗಳೂರು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮುಹಮ್ಮದ್ ಆರಿಫ್ ಪಡುಬಿದ್ರೆ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

You may also like

News

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಆರೋಪ ಖಂಡನೀಯ — AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ
News

ನವೆಂಬರ್ 2ರಂದು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ

ಐತಿಹಾಸಿಕ 50 ವರ್ಷದ ಪಯಣ MLC ಐವನ್ ಡಿಸೋಜ ನೇತೃತ್ವದಲ್ಲಿ ಪತ್ರಿಕಾ ಗೋಷ್ಠಿ ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವು

You cannot copy content of this page