August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಇಬ್ಬರು ಯುವಕರ ಮೇಲೆ ತಲ್ವಾರ್ ದಾಳಿ – ಓರ್ವ ಮೃತ್ಯು

ಬಂಟ್ವಾಳದ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ‌ಯಲ್ಲಿ ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ರಹೀಂ ಎಂಬಾತನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿದ ಘಟನೆ ಇಂದು ಮೇ 27ರಂದು ಮಂಗಳವಾರ ನಡೆದಿದೆ.

ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್ ದಾಳಿ‌ ನಡೆಸಿ ಪರಾರಿಯಾಗಿದ್ದಾರೆ. ರಹೀಂ ಜೊತೆಗಿದ್ದ ಇನ್ನೊಬ್ಬನ ಮೇಲೂ ದಾಳಿ ನಡೆಸಲಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page