November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮತೀಯ ಗಲಭೆ ಹಾಗೂ ನೈತಿಕ ಪೊಲೀಸ್ ಗಿರಿ ಹತ್ತಿಕುವೆ – ಹೊಸ ಪ್ರಭಾರ ಪೊಲೀಸ್ ಅಧೀಕ್ಷಕ  ಡಾ. ಅರುಣ್ ಕೆ.

ಸಾರ್ವಜನಿಕರು ನೇರವಾಗಿ ಮತ್ತು ಮುಕ್ತವಾಗಿ ಮಾಹಿತಿ ನೀಡಲು ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ಅಧೀಕ್ಷಕರಾಗಿ ಇಂದು ಮೇ 30ರಂದು ಬೆಳಿಗ್ಗೆ ಡಾ. ಅರುಣ್ ಕೆ. ರವರು ಅಧಿಕಾರ ಸ್ವೀಕರಿಸಿದರು. ತಮ್ಮ ಮೊದಲ ಪತ್ರಿಕಾ ಪ್ರಕಟಣೆಯಲ್ಲಿ ಮತೀಯ ಪ್ರಕರಣಗಳನ್ನು ಹಾಗೂ ನೈತಿಕ ಪೊಲೀಸ್ ಗಿರಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು.

ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗೋಹತ್ಯೆ/ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ಮಾರಾಟ/ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಈ ವಿಚಾರವಾಗಿ ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಹಾಗೂ ಮುಕ್ತವಾಗಿ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ. ಐಪಿಎಸ್ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page