August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ಸಹಾಯಕ ಲೈನ್ ಮ್ಯಾನ್ ವಿದ್ಯುತ್ ಆಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೃತಪಟ್ಟವರನ್ನು ಓಡಿಲ್ನಾಳ ನಿವಾಸಿ ವಿಜೇಶ್ ಎಂದು ಗುರುತಿಸಲಾಗಿದೆ. ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಪರಿವರ್ತಕದಲ್ಲಿ ಉಂಟಾಗಿದ್ದ ತೊಂದರೆಯನ್ನು ಸರಿಪಡಿಸಲು ಅವರು ಕಂಬವೇರಿದ್ದರು. ಕೆಲಸ ನಿರ್ವಹಿಸಲು ಜಿಒಎಸ್‌ನಲ್ಲಿ ವಿದ್ಯುತ್ ಕಡಿತಗೊಳಿಸಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಿಒಎಸ್‌ನಲ್ಲಿ ಸರಿಯಾಗಿ ವಿದ್ಯುತ್ ಕಡಿತಗೊಳ್ಳದ ಕಾರಣ ಈ ದುರಂತ ನಡೆದಿದೆ ಎಂದು ತಿಳಿದು ಬಂದಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page