ಫೇಸ್ ಬುಕ್ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್
ಯತೀಶ್ ಪೆರುವಾಯ್ ಖಾತೆ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನು ಉಂಟುಮಾಡುವ ೦3 ಪೋಸ್ಟ್ ಗಳನ್ನು ಪ್ರಸಾರ ಮಾಡಿರುವುದಾಗಿದೆ. ಸದ್ರಿ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಮೇ 31ರಂದು ಅ.ಕ್ರ: 72/2025 ಕಲಂ: 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.




