ಸಮಾಜದ ಸ್ವಾಸ್ಥ ಕೆಡುವಂತೆ ಪ್ರಚೋದನಾತ್ಮಕ ಹೇಳಿಕೆ – ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು
ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ವೈಮನಸ್ಸು ಉಂಟು ಮಾಡುವಂತಹ ಹೇಳಿಕೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮವು ನಡೆದಿತ್ತು. ಮೇ 12ರಂದು ನಡೆದ ಈ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನು ಉದ್ದೇಶಿಸಿ ಭಾಷಣ ಮಾಡುವ ವೇಳೆ, ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ ಹಾಗೂ ಸಮಾಜದ ಸ್ವಾಸ್ಥ ಕೆಡುವಂತೆ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ.

ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಇಂದು ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.




