ಕೇರಳದಿಂದ ಕರ್ನಾಟಕಕ್ಕೆ ಕಂಟೈನರ್ ನಲ್ಲಿ ಅಕ್ರಮ ಜಾನುವಾರು ಸಾಗಾಟ – ಪ್ರಕರಣ ದಾಖಲು
ಜಾನುವಾರುಗಳನ್ನು ರಕ್ಷಿಸಿ ಗೋ ಶಾಲೆಗೆ ನೀಡಿದ ಪೊಲೀಸರು

ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಸ್ತೆಗಳಲ್ಲಿ ಜೂನ್ 1ರಂದು ಹೆಚ್ಚು ಚೆಕ್ ಪೋಸ್ಟ್‌ಗಳನ್ನು ತೆರೆದು ಬೆಳಗ್ಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ವಾಹನವನ್ನು ತಲಪಾಡಿ ಟೋಲ್ ಗೇಟ್ ಬಳಿ ಪತ್ತೆ ಹಚ್ಚಿ ವಾಹನದಲ್ಲಿದ ಆರೋಪಿಯನ್ನು ಬಂಧಿಸಿ ಕಂಟೈನರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದೆ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಂಟೈನರ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.

ಹೀಗೆ ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿರುತ್ತಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2025 ರಂತೆ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿರುತ್ತದೆ. ಸದರಿ ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ.




