August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನನಗೆ ಗಡಿಪಾರು ನೋಟಿಸ್ ನೀಡಲು ಪುತ್ತೂರು ಶಾಸಕ ಅಶೋಕ್ ರೈಯೇ ಕಾರಣ – ಹಕಿಂ ಕೂರ್ನಡ್ಕ

ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು ಮೊದಲು ಗಡಿಪಾರು ಮಾಡಲಿ

ಕಾಂಗ್ರೆಸ್ ಕಾರ್ಯಕರ್ತ ಹಕೀಂ‌ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು ಮೊದಲು ಗಡಿಪಾರು ಮಾಡಲಿ ಎಂದು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪುತ್ತೂರು ಪೊಲೀಸರು ಸಹಾಯಕ ಆಯುಕ್ತರಿಗೆ ನನ್ನ ಮೇಲೆ ಇರುವ ಸುಳ್ಳು ದೂರುಗಳ ಮಾಹಿತಿ ನೀಡಿದ್ದಾರೆ. ಅಶೋಕ್ ರೈ ವಿರುದ್ಧ ಮಾತನಾಡಿದ್ರೆ ನಿಮ್ಮನ್ನ ಗಡಿಪಾರು ಮಾಡುತ್ತೇವೆಂದು ಪುತ್ತೂರು ನಗರ ಠಾಣೆಯ ಇನ್ಸ್ ಪೆಕ್ಟರ್ ಈ ಹಿಂದೆ ಹೇಳಿದ್ರು, ಇದೀಗ ಯಾವುದೇ ಗುಂಪು ಗಲಭೆ, ಕೋಮುಗಲಭೆ, ಹಲ್ಲೆ, ಹತ್ಯೆ, ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಗಳಲ್ಲಿ ಇಲ್ಲದ ನನ್ನನ್ನು ಯಾಕೆ ಗಡಿಪಾರು ಮಾಡಬಾರದೆಂಬ ನೋಟೀಸ್ ನೀಡಿದ್ದಾರೆ.

ನನ್ನ ಗಡಿಪಾರು ನೋಟಿಸ್ ಹಿಂದೆ ಶಾಸಕ ಅಶೋಕ್‌ರೈ ಅವರ ಕೈವಾಡವಿದೆ. ಮುಸಲ್ಮಾನರ ಮತ ಪಡೆದು ಗೆದ್ದಿರುವ ಅಶೋಕ್ ರೈ ಮುಸಲ್ಮಾನರಿಗೆಯೇ ಅನ್ಯಾಯ ಮಾಡ್ತಾ ಇದ್ದಾರೆ. ಇತ್ತೀಚೆಗೆ ಹತ್ಯೆಯಾದ ರಹೀಂ ಮನೆಗೆ ಸಾಂತ್ವನ ಹೇಳಲು ಅಶೋಕ್ ರೈ ಯಾಕೆ ಹೋಗಿಲ್ಲ? ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿಗೆ ಬಂದಿರುವಾಗ ಶಾಸಕ ಅಶೋಕ್ ರೈ ಸಚಿವರನ್ನು ಭೇಟಿ ಮಾಡಲು ಯಾಕೆ ಬಂದಿರಲಿಲ್ಲ. ಯಾಕಂದ್ರೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ರಹೀಂ ಮನೆಗೆ ಸಾಂತ್ವನ ಹೇಳಲು ಹೋಗಬೇಕಾಗಬಹುದು, ಸಾಂತ್ವನ ಹೇಳಲು ಹೋದರೆ ನನಗೆ ಹಿಂದೂಗಳ ಮತ ಸಿಗುವುದಿಲ್ಲ. ಎಂಬುದು ಅವರ ಮನಸ್ಸಿನಲ್ಲಿದೆ. ಅಶೋಕ್ ರೈಗಳೇ ನೀವು ನನ್ನ ಬೆವರಿನಿಂದ ಶಾಸಕರಾಗಿದ್ದೀರಿ. ಮುಂದಿನ ಬಾರಿ ನಿಮ್ಮನ್ನು ನಾನು ಮಾಜಿ ಶಾಸಕನಾಗಿ ಮಾಡುತ್ತೇನೆ. ನೀವು ಒಂದು ಗ್ರಾಮ ಪಂಚಾಯತ್ ಚುನವಣೆಯಲ್ಲೂ ನಿಂತರೂ ಸೋಲಿಸುತ್ತೇನೆ ಎಂದು ಹಕಿಂ ಸವಾಲು ಹಾಕಿದ್ದಾರೆ. ನನ್ನನ್ನು ಗಡಿಪಾರು ಮಾಡುವ ಮೊದಲು ಅಶೋಕ್ ರೈ ಅವರನ್ನು ಗಡಿಪಾರು ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ ಪಿಸ್ತೂಲ್ ಹಿಡಿದು ಜನರನ್ನು ಬೆದರಿಸಿದವರು. ಅಶೋಕ್ ರೈಗಳ ಜೊತೆ ಇರೋದು ಜಲೀಲ್ ಕರೋಪಾಡಿ ಹತ್ಯೆ ಪ್ರಕರಣದ ಆರೋಪಿಗಳು. ಯಾಕೆ ಅವರನ್ನ ಗಡಿಪಾರು ಮಾಡಿಲ್ಲ. ಪ್ರಜ್ವಲ್ ರೈ ಮತ್ತು ದೀಕ್ಷಿತ್ ರೈ ಅವರನ್ನು ಗಡಿಪಾರು ಮಾಡಲಿ. ಅಶೋಕ್ ರೈ ಜೊತೆ ಇರುವವರು ಉಪ್ಪಿನಂಗಡಿಯಲ್ಲಿ ತಲ್ವಾರ್ ಕಾಳಗ ಮಾಡಿದವರು. ಅವರ ಮೇಲೆ ಪ್ರಕರಣ ದಾಖಲಾಗಿದೆಯಾ? ಎಂದು ಪ್ರಶ್ನಿಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page