August 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿ ಸಾವು

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳ್ಳೆ ಗ್ರಾಮದ 65ವರ್ಷ ಪ್ರಾಯದ ಪೀಟರ್ ಮಥಾಯಸ್ ಎಂಬುವವರು ಮಣಿಪಾಲ ಕೆಂಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಇಂದು ಜೂನ್ 3ರಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

ಮನೆಯವರಿಗೆ ಯಾರಿಗೂ ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ. ಮೃತದೇಹ ಇನ್ನೂ ಆಸ್ಪತ್ರೆಯಲ್ಲಿಯೇ ಇದ್ದು, ನಾಳೆ ಜೂನ್ 4ರಂದು ಬುಧವಾರ ಕೋವಿಡ್ SOP ಅನುಸರಿಸಿ ಅಂತ್ಯ ಸಂಸ್ಕಾರ ಕೈಗೊಳ್ಳಲು ತಹಶೀಲ್ದಾರ್ ಸೂಚಿಸಿದ್ದಾರೆ. ಪೀಟರ್ ಮಥಾಯಸ್‌ರವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಳೆದ ಮೇ 29ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೊರೋನ ದೃಢಪಟ್ಟಿರುತ್ತದೆ. ಜೂನ್ 2ರಂದು ಸೋಮವಾರ ಅವರು ಮೃತ ಪಟ್ಟಿದ್ದಾರೆ.
ತಹಶೀಲ್ದಾರ್ ಮತ್ತು ವೈದ್ಯರ ತಂಡ, ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿ ಊರಿನ ಜನರಿಗೆ ಕೊರೋನ ಮುನ್ನೆಚ್ಚರಿಕೆಗಳ ಬಗ್ಗೆ ಅರಿವು ಮೂಡಿಸಿದ್ದಾರೆ.
ತಾಲೂಕು ವೈದ್ಯಾಧಿಕಾರಿ ಡಾ. ವಾಸುದೇವ್, ಶಿರ್ವ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ, ಡಾ. ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ, ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಹಾಜರಿದ್ದರು.

You may also like

News

ಮಂಗಳೂರಿನಲ್ಲಿ ಪರ್ಯಾಯ ದಿನ ನೀರು ಪೂರೈಕೆ – ಆಗಸ್ಟ್‌ 31ರವರೆಗೆ ತಾತ್ಕಾಲಿಕ ವ್ಯವಸ್ಥೆ

ತುಂಬೆ ಜಾಕ್‌ವೆಲ್‌ನ ಇನ್‌ಟೇಕ್‌ ಭಾಗದಲ್ಲಿ ಮಳೆನೀರಿನೊಂದಿಗೆ ಮರದ ದಿಮ್ಮಿಗಳು, ಕೊಂಬೆಗಳು, ಪ್ಲಾಸ್ಟಿಕ್‌ ತ್ಯಾಜ್ಯ, ಬಟ್ಟೆ, ಚೀಲಗಳು, ಹೂಳು ಸೇರಿದಂತೆ ವಿವಿಧ ತ್ಯಾಜ್ಯಗಳು ಸಂಗ್ರಹಗೊಂಡ ಪರಿಣಾಮ ನೀರು ಪಂಪಿಂಗ್‌
News

ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ ವಿಷನ್ ಸಮಿತಿ ಅಧ್ಯಕ್ಷರಾಗಿ ಡಾ. ಅಖ್ತರ್ ಹುಸೇನ್ ನೇಮಕ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ (State Oral Health Programme) ವಿಷನ್ ಸಮಿತಿ ಅಧ್ಯಕ್ಷರಾಗಿ

You cannot copy content of this page