October 31, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಸಂಚಾರ ತಾತ್ಕಾಲಿಕ ಬಂದ್ – ತಹಶೀಲ್ದಾರ್ ಅರ್ಚನಾ ಭಟ್ ಆದೇಶ

ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಎಂದು ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಕಟ್ಟುನಿಟ್ಟಾಗಿ ಪಾಲಿಸಲು ಸೂಕ್ತ ಕ್ರಮವಹಿಸುವುದು ಎಂದು ಅದೇಶದಲ್ಲಿ ಉಲ್ಲೇಖಿಸಲಾಗಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದಲ್ಲಿರುವ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಳೆಯ ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು. ಸೇತುವೆಯಲ್ಲಿ ಈ ಹಿಂದೆ ಬಿರುಕು ಬಂದ ಹಿನ್ನಲೆಯಲ್ಲಿ ಸೇತುವೆಯ ಮೇಲೆ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಕಬ್ಬಿಣದ ಕಮಾನು ಅಳವಡಿಸಿ ಬಂದ್ ಮಾಡಲಾಗಿದ್ದು ಪ್ರಸ್ತುತ ಕಬ್ಬಿಣದ ಕಮಾನನ್ನು ಹಾನಿಗೊಳಿಸಿ ಘನವಾಹನಗಳು ಸಂಚರಿಸುತ್ತಿರುವುದು ವರದಿಯಾಗಿರುತ್ತದೆ.

ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು, ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಅಲ್ಲದೆ ಸೇತುವೆಯ ಧಾರಣಾ ಸಾಮರ್ಥ್ಯದ ಕುರಿತು ಸಕ್ಷಮ ಇಲಾಖೆಯಿಂದ ವರದಿ ಬರುವವರೆಗೆ ಸೇತುವೆಯ ಮೇಲೆ ಸಂಚಾರ ಮಾಡುವುದನ್ನು ಅಪಾಯಕಾರಿ ಎಂದು ಪರಿಗಣಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 68 ರ ಪ್ರಕಾರ ಈ ಅದೇಶ ಹೊರಡಿಸಿದೆ. ಹಳೆಯ ಸೇತುವೆಯ ಮೇಲೆ ವಾಹನ ಸಂಚಾರ ಜನಸಂಚಾರ ಅಪಾಯಕಾರಿಯಾಗಿದ್ದು ಸೇತುವೆಯ ಧಾರಣ ಸಾಮಾರ್ಥ್ಯದ ಬಗ್ಗೆ ವರದಿ ನೀಡುವಂತೆ ತಹಶಿಲ್ದಾರ್ ಪುರಸಭೆಗೆ ಸೂಚನೆ ನೀಡಿದ್ದರು. ಆದರೆ ತಹಶಿಲ್ದಾರ್ ಅವರ ಸೂಚನೆಗೆ ಬೆಲೆ ನೀಡದ ಇಲಾಖೆ ಈವರೆಗೆ ವರದಿಯನ್ನು ನೀಡಿರಲಿಲ್ಲ. ಪದೇ ಪದೇ ಏನಾದರೂ ಒಂದು ಸುದ್ದಿಯಾಗತ್ತಲೇ ಅಪಾಯಕಾರಿ ಸೇತುವೆಯಲ್ಲಿ ಘನ ವಾಹನಗಳು ಸಂಚಾರ ಮಾಡುವುದು ಮೇಲಾಧಿಕಾರಿಗಳ‌ ಗಮನಕ್ಕೆ ಬಂದಿದೆ. ಹಾಗಾಗಿ ಸೇತುವೆ ಸುರಕ್ಷತೆ ಹಾಗೂ ಸಾರ್ವಜನಿಕರ ‌ಸುರಕ್ಷತೆಯ ದೃಷ್ಟಿಯಿಂದ ಮುಂದಿನ ನಿರ್ಧಾರ ಕೈಗೊಳ್ಳುವವರೆಗೆ ತಾತ್ಕಾಲಿಕವಾಗಿ ನಿರ್ಭಂದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

You may also like

News

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಘೋಷಣೆ

ಸಮಾಜಸೇವೆ, ಕಲೆ, ಕ್ರೀಡೆ, ವ್ಯವಹಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದ 94 ಸಾಧಕರಿಗೆ ಗೌರವ ದಕ್ಷಿಣ ಕನ್ನಡ ಜಿಲ್ಲಾ ಆಡಳಿತವು 2025ನೇ ವರ್ಷದ ಜಿಲ್ಲಾ
News

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಆರೋಪ ಖಂಡನೀಯ — AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ

You cannot copy content of this page