ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ನಝೀರ್
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತರಾಗಿರುವ ನೂರ್ ಜಹಾನ್ ಖಾನಂ ಅವರನ್ನು ವರ್ಗಾವಣೆ ಮಾಡಿರುವ ನಗರಾಭಿವೃದ್ಧಿ ಇಲಾಖೆ, ಅವರ ಸ್ಥಾನಕ್ಕೆ ಆರ್ಥಿಕ್ ಅಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿರುವ ಮೊಹಮ್ಮದ್ ನಝೀರ್ ರವರನ್ನು ನಿಯೋಜಿಸಿದೆ.


ಮೊಹಮ್ಮದ್ ನಝೀರ್ ರವರು ಈ ಹಿಂದೆಯೂ ಮುಡಾ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾಗಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಅವರು ಈ ಹಿಂದೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದರು.




