ನ್ಯಾಯಾಲಯದ ಚೇಂಬರ್ ನಲ್ಲಿದ್ದಾಗಲೇ ಹೃದಯಾಘಾತ – ನಿಧನರಾದ ನ್ಯಾಯಾಧೀಶರು
ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ವಿಶ್ವನಾಥ್ ಮುಗುಟಿ ಹೃದಯಾಘಾತದಿಂದ ಮೃತರಾಗಿದ್ದಾರೆ.


44 ವರ್ಷದ ವಿಶ್ವನಾಥ್ ಮುಗುಟಿ 15 ದಿನಗಳ ಹಿಂದಷ್ಟೇ ಕಲಬುರ್ಗಿ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡಿದ್ದರು. ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿ ಇದ್ದ ಸಂದರ್ಭದಲ್ಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಕೊನೆಯುಸಿರು ಎಳೆದರು ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ನ್ಯಾಯಾಧೀಶರಾದ ವಿಶ್ವನಾಥ್ ಅವರ ಅಗಲುವಿಕೆಗೆ ಜಿಲ್ಲಾ ವಕೀಲರ ಸಂಘ ತೀವ್ರ ಆಘಾತ ಮತ್ತು ಸಂತಾಪವನ್ನು ವ್ಯಕ್ತಪಡಿಸಿದೆ.




