ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ದಿಢೀರ್ ವರ್ಗಾವಣೆ
ದಕ್ಷಿಣ ಕನ್ನಡಕ್ಕೆ ದರ್ಶನ್ ಎಚ್.ವಿ. ಹಾಗೂ ಉಡುಪಿಗೆ ಸ್ವರೂಪ ಟಿ.ಕೆ. ನೂತನ ಜಿಲ್ಲಾಧಿಕಾರಿಗಳಾಗಿ ನೇಮಕ

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್.ವಿ. ರವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್.ಡಿ.ಪಿ.ಆರ್.) ನಿರ್ದೇಶಕರಾಗಿರುವ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.




