September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂತ ಆಗ್ನೆಸ್ ಶಾಲೆಯಲ್ಲಿ ‘ಮೆರಿಟ್ ಡೇ’ ಆಚರಣೆ

ಎಳವೆಯಲ್ಲಿ ತೋರಿದ ಸಾಧನೆಗೆ ಫಲ ದೊರೆತಾಗ ಮುಂದಿನ ಜೀವನಕ್ಕೆ ಅದೇ ದಾರಿದೀಪವಾಗಿ ಇನ್ನಷ್ಟು ಸಾಧನೆ ಮಾಡುವಲ್ಲಿ ಪ್ರೇರಣೆ ದೊರಕುತ್ತದೆ. ಮಂಗಳೂರಿನ ಸಂತ ಆಗ್ನೆಸ್ ಸಿ.ಬಿ.ಎಸ್.ಇ. ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್.ಕೆ.ಜಿ.ಯಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ತೋರಿದ ವಾರ್ಷಿಕ ಸಾಧನೆಗೆ ಅನುಗುಣವಾಗಿ ಪ್ರಮಾಣ ಪತ್ರ ಹಾಗೂ ಸಾಧನಾ ಫಲಕಗಳನ್ನು ನೀಡಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಸೈಂಟ್ ಆಗ್ನೆಸ್ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರು ಹಾಗೂ ಗಣಿತ ಉಪನ್ಯಾಸಕರಾದ ಭಗಿನಿ ಜಾನೆಟ್ ಹಾಗೂ ಪದವಿ ಕಾಲೇಜಿನ ಗಣಿತ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಭಗಿನಿ ಲಿನೆಟ್ ಡಿಸೋಜ ಇವರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತರಗತಿಯಲ್ಲಿ ಅತ್ಯಧಿಕ ಅಂಕ ಹಾಗೂ ವಿಷಯವಾರು ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.  ಅಂತೆಯೇ ಅದೇ ಶೈಕ್ಷಣಿಕ ವರ್ಷದಲ್ಲಿ ನೂರು ಶೇಕಡ ಹಾಜರಾತಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಭಗಿನಿ ಮರಿಯ ಸಾರಿಕ, ಉಪ ಪ್ರಾಂಶುಪಾಲರಾದ ಭಗಿನಿ ಮೀನಾ ಫೆರ್ನಾಂಡಿಸ್, ಸಂಯೋಜಕರಾದ ಭಗಿನಿ ಲವಿ ಶಾಂತಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page