ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಎಎಸ್‌ಐ, ಹೆಡ್ ಕಾನ್‌ಸ್ಟೇಬಲ್ ಸಹಿತ 116 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 116 ಪೊಲೀಸ್ ಸಿಬ್ಬಂದಿಯನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆ ಆದೇಶವನ್ನು 2025ರ ಜೂನ್ 10 ರಂದು ಹೊರಡಿಸಲಾಗಿದೆ.

ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಂಡವರಲ್ಲಿ 7 ಸಹಾಯಕ ಸಬ್ ಇನ್ಸ್‌ಪೆಕ್ಟರ್‌ಗಳು 31 ಸಿವಿಲ್ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು 78 ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ. ಈ ವರ್ಗಾವಣೆಯು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.




