May 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಚರ್ಚ್ ನ ನೂತನ ಧರ್ಮಗುರುಗಳಾಗಿ ಫಾದರ್ ರಿಚ್ಚರ್ಡ್ ಅಲೋಶಿಯಸ್‌ ಕುವೆಲ್ಲೊ ಅಧಿಕಾರ ಸ್ವೀಕಾರ 

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆ ಸಂತ ತೆರೆಸಾರವರಿಗೆ ಸಮರ್ಪಿತ ಚರ್ಚ್ ನ ನೂತನ ಧರ್ಮಗುರುಗಳಾಗಿ ನಿಯೋಜನೆಗೊಂಡಿರುವ ವಂದನೀಯ ಫಾದರ್ ರಿಚ್ಚರ್ಡ್ ಅಲೋಶಿಯಸ್‌ ಕುವೆಲ್ಲೊರವರು ಜೂನ್ 20ರಂದು ಶುಕ್ರವಾರ ಅಧಿಕಾರವನ್ನು ಸ್ವೀಕರಿಸಿದರು. ಅವರು ಕಳೆದ 17 ವರ್ಷಗಳಿಂದ ಕಂಕನಾಡಿ ಫಾದರ್‌ ಮುಲ್ಲರ್‌ ಸಮೂಹ ಸಂಸ್ಥೆಗಳ ನಿರ್ದೇಶಕರಾಗಿ ನಿಷ್ಠಾವಂತ ಸೇವೆ ಸಲ್ಲಿಸಿದ್ದರು. ಶುಕ್ರವಾರ ಪಾಲ್ದನೆ ಚರ್ಚ್ ಗೆ ಆಗಮಿಸಿದ ಸಂದರ್ಭ ಧರ್ಮಗುರು ವಂದನೀಯ ಫಾದರ್ ಆಲ್ಬನ್‌ ಡಿ’ಸೋಜ, ಸಿಟಿ ವಲಯದ ಶ್ರೇಷ್ಠಗುರು ಅತೀ ವಂದನೀಯ ಫಾದರ್ ಜೇಮ್ಸ್ ಡಿಸೋಜ, ಚರ್ಚ್‌ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊಂತೇರೊ, ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ ಮತ್ತು ಪದಾಧಿಕಾರಿಗಳು ಹೂಗುಚ್ಚ ನೀಡಿ ಹಾರ್ದಿಕ ಸ್ವಾಗತ ಕೋರಿದರು. ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ ವಿಧಾನಗಳ ಬಳಿಕ ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ್ದ ಮಂಗಳೂರು ಸಿಟಿ ವಲಯದ ಶ್ರೇಷ್ಠಗುರು ಅತೀ ವಂದನೀಯ ಫಾದರ್ ಜೇಮ್ಸ್ ಡಿಸೋಜರವರು ಅಧಿಕಾರ ಸ್ವೀಕಾರ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಬಳಿಕ ನೂತನ ಧರ್ಮಗುರುಗಳಿಗೆ ಅಭಿನಂದನಾ ಕಾರ್ಯವನ್ನು ಏರ್ಪಡಿಸಲಾಗಿತ್ತು. ಚರ್ಚ್ ನ ನಿರ್ಗಮನ ಧರ್ಮಗುರು ವಂದನೀಯ ಫಾದರ್ ಆಲ್ಬನ್‌ ಡಿಸೋಜರವರು ತನಗೆ ಇದುವರೆಗೆ ನೀಡಿದ ಸಹಕಾರಕ್ಕೆ ಭಕ್ತಾಧಿಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಬಳಿಕ ಮಾತನಾಡಿದ ನೂತನ ಧರ್ಮಗುರು ವಂದನೀಯ ಫಾದರ್ ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊರವರು ತನ್ನ ಮುಂದಿನ ಸೇವೆಗೆ ಚರ್ಚ್ ಪಾಲನಾ ಸಮಿತಿಯ ಹಾಗೂ ಭಕ್ತಾಧಿಗಳ ಸಹಕಾರ ಕೋರಿದರು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ರವರು ಸ್ವಾಗತಿಸಿ ನೂತನ ಧರ್ಮಗುರುಗಳ ಕಿರು ಪರಿಚಯ ಮಾಡಿ ಕೊಟ್ಟರು. ಪಾಲನಾ ಸಮಿತಿಯ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಹಾಗೂ ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ ವೇದಿಕೆಯಲ್ಲಿದ್ದ ಧರ್ಮಗುರುಗಳನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನೂತನ ನಿರ್ದೇಶಕರಾದ ವಂದನೀಯ ಫಾದರ್ ಫಾವುಸ್ತಿನ್ ಲೂಕಸ್ ಲೋಬೊ, ವಂದನೀಯ ಫಾದರ್ ಅಜಿತ್ ಮಿನೇಜಸ್, ವಂದನೀಯ ಫಾದರ್ ಜೀವನ್ ಸಿಕ್ವೇರಾ, ವಂದನೀಯ ಫಾದರ್ ನೆಲ್ಸನ್ ಪಾಯ್ಸ್, ವಂದನೀಯ ಫಾದರ್ ಸಿಲ್ವೆಸ್ಟರ್ ಲೋಬೊ, ವಂದನೀಯ ಫಾದರ್ ರುಡಾಲ್ಫ್ ರವಿ ಡೆಸಾ, ವಂದನೀಯ ಫಾದರ್ ನೀಲೇಶ್ ಕ್ರಾಸ್ತಾ, ವಂದನೀಯ ಫಾದರ್ ಅಶ್ವಿನ್ ಕ್ರಾಸ್ತಾ, ವಂದನೀಯ ಫಾದರ್ ಜಾನ್ ವಾಸ್, ಡಾ. ಆಂಟನಿ ಸಿಲ್ವಾನ್, ಡಾ. ಉದಯ್ ಕುಮಾರ್, ಡಾ. ಕಿರಣ್ ಶೆಟ್ಟಿ, ಎಂ.ಪಿ. ನೊರೊನ್ಹಾ, ನವೀನ್ ಡಿಸೋಜ, ಡಾ. ಕೆಲ್ವಿನ್ ಪಾಯಸ್ ಮುಂತಾದವರು ಉಪಸ್ಥಿತರಿದ್ದರು. ಜೆನಿಟಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ

ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ

You cannot copy content of this page