ಲೋಕಾಯುಕ್ತ ಪರಿಶೀಲನೆಯ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಂಗಳೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿ ಸುಧೀರ್ಘ ಚರ್ಚೆ
ಮಂಗಳೂರು ಮಹಾನಗರ ಪಾಲಿಕೆಯ ಅವ್ಯವಸ್ಥೆ ಹಾಗೂ ನ್ಯೂನ್ಯತೆಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ರವರು ಜೂನ್ 23ರಂದು ಸೋಮವಾರ ಭೇಟಿ ನೀಡಿ ಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆಯನ್ನೂ ನಡೆಸಿದರು.

ಅನಂತರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು. ಪ್ರಸ್ತುತ ಮಂಗಳೂರು ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದರು. ಪ್ರವಾಹ ನಿಯಂತ್ರಣಕ್ಕೆ ನಡೆದಿರುವ ಕಾಮಗಾರಿಗಳ ಕುರಿತು ಸುದೀರ್ಘ ಚರ್ಚೆಯನ್ನೂ ನಡೆಸಿದರು.

ಇದುವರೆಗೆ ನಡೆದಿರುವ ಯೋಜನೆಗಳ ಮಾಹಿತಿಯನ್ನು ಪಡೆಯಲು ಅವರು ಸ್ಮಾರ್ಟ್ ಸಿಟಿ ಕಚೇರಿಗೆ ಭೇಟಿ ಕೊಟ್ಟರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಸ್ಮಾರ್ಟ್ ಸಿಟಿ ಎಂ.ಡಿ. ರಾಜು ಮತ್ತಿತರರು ಇದ್ದರು.




