August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬನ್ನೂರು ಚರ್ಚ್ ದಫನ ಭೂಮಿಯಲ್ಲಿನ ಸಮಾಧಿ ಧ್ವಂಸ – ಪ್ರಕರಣ ದಾಖಲು

ಪುತ್ತೂರಿನ ಆನೆಮಜಲು ಪ್ರದೇಶದ ಬನ್ನೂರಿನ ಸೈಂಟ್ ಆ್ಯಂಟನಿ ಚರ್ಚ್‌ನಲ್ಲಿ ಕ್ರಿಶ್ಚಿಯನ್ನರ ಸಮಾಧಿಯೊಂದು ಧ್ವಂಸಗೊಂಡಿರುವುದು ಕಂಡುಬಂದಿದೆ. ವಂದನೀಯ ಫಾದರ್ ಬಾಲ್ತಜಾರ್ ಪಿಂಟೊರವರು ಪುತ್ತೂರು ನಗರ ಠಾಣೆಯಲ್ಲಿ ಜೂನ್ 14ರಂದು ಶನಿವಾರ ದೂರನ್ನು ನೀಡಿದ್ದಾರೆ. ಈ ಘಟನೆ ಸ್ಥಳೀಯ ಕ್ರಿಶ್ಚಿಯನ್ ಸಮುದಾಯದಲ್ಲಿ ಕಳವಳ ಮೂಡಿಸಿದೆ.

ದೈವಾಧೀನರಾದ ಕಥೊಲಿಕ್ ಧರ್ಮದ ವ್ಯಕ್ತಿಗಳನ್ನು ಈ ಸ್ಥಳದಲ್ಲಿ ದಫನ ಮಾಡಲಾಗುತ್ತದೆ.  ಈ ಧಫನ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಸದ್ರಿ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page