ಸಹಪಾಠಿಯನ್ನು ಗರ್ಭ ಧರಿಸುವಂತೆ ಮಾಡಿದ ಸಹಪಾಠಿ – ಆರೋಪಿ ಪರಾರಿ
ಸಹಪಾಠಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಯುವಕನೋರ್ವನ ವಿರುದ್ಧ ಸಂತ್ರಸ್ತೆ ನೀಡಿರುವ ದೂರಿನಂತೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.

ಆರೋಪಿ ಹಾಗೂ ಸಂತ್ರಸ್ತೆ ಸಹಪಾಠಿಗಳು ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆರೋಪಿ ಯಾರೂ ಇಲ್ಲದ ಸಂದರ್ಭ ಯುವತಿಯನನ್ನು ಮನೆಗೆ ಕರೆತಂದು ಮದುವೆ ಆಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪರಿಣಾಮ ಪಿರ್ಯಾದಿದಾರರು ಗರ್ಭಿಣಿಯಾಗಿದ್ದು, ಈ ಬಗ್ಗೆ ಪಿರ್ಯಾದಿದಾರರು ಅರೋಪಿಗೆ ತಿಳಿಸಿದಾಗ ಆರೋಪಿಯು ಮದುವೆಯಾಗಲು ನಿರಾಕರಿಸಿರುತ್ತಾನೆ. ಈ ಬಗ್ಗೆ ಪಿರ್ಯಾದಿದಾರರು ಆರೋಪಿಯ ವಿರುದ್ಧ ಜೂನ್ 24ರಂದು ಮಂಗಳವಾರ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ 49/2025, ಕಲಂ:64(1), 69 ಬಿ.ಎನ್.ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.




