August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಾತಿ ನಿಂದನೆ ಪ್ರಕರಣ – ಆರೋಪಿ ತಂದೆ ಮತ್ತು ಮಗ ದೋಷಮುಕ್ತ

ಪುತ್ತೂರಿನ ಪ್ರಖ್ಯಾತ ನ್ಯಾಯವಾದಿ ಮಹೇಶ್ ಕಜೆ ಮಂಡಿಸಿದ ವಾದ

ಜಾತಿ ನಿಂದನೆ ಆರೋಪ ಎದುರಿಸುತ್ತಿದ್ದ ನೆಲ್ಯಾಡಿ ನಿವಾಸಿಗಳಾದ ಗಣಪಯ್ಯ ಗೌಡ ಹಾಗೂ ಅವರ ಮಗ ಸೋಮಶೇಖರ ಗೌಡ ಎಂಬವರನ್ನು ದೋಷಮುಕ್ತಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶವನ್ನು ನೀಡಿದೆ. ನೆಲ್ಯಾಡಿ ಗ್ರಾಮದ ಮೇಲ್ಮಕ್ಕಿ ನಿವಾಸಿ ಅಣ್ಣು ಎಂಬುವರು 2017 ಫೆಬ್ರವರಿ 22ರಂದು ರಾತ್ರಿ ಮನೆಯಲ್ಲಿದ್ದ ಸಮಯ ನೆರೆ ಮನೆಯ ಗಣಪಯ್ಯ ಗೌಡ ಮತ್ತು ಅವರ ಮಗ ಸೋಮಶೇಖರ ಗೌಡರವರು ಏಕಾಏಕಿಯಾಗಿ ಅಣ್ಣು ಅವರ ಮನೆಯ ಅಂಗಳಕ್ಕೆ ಬಂದು ಅಣ್ಣು ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಕೈ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆಯನ್ನು ಒಡ್ಡಿದ್ದರು ಎಂದು ಆರೋಪಿಸಲಾಗಿತ್ತು.

ಗಾಯಗೊಂಡಿದ್ದ ಅಣ್ಣು ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಹಳೆ ದ್ವೇಷದಿಂದ ಈ ಕೃತ್ಯ ಎಸಗಲಾಗಿತ್ತು ಎಂದು ಆರೋಪಿಸಿ ಅಣ್ಣು ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಕೇಸನ್ನು ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶವನ್ನು ನೀಡಿದೆ. ಆರೋಪಿಗಳ ಪರ ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ನ್ಯಾಯಾವಾದಿ ಮಹೇಶ್ ಕಜೆ ವಾದಿಸಿದ್ದರು.

 

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page