August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್  ಸೇವನೆ ವಿರುದ್ಧ ಸಹಾಯಕ ಆಯುಕ್ತ ಹರ್ಷವರ್ಧನ್ ಕಾರ್ಯಾಚರಣೆಗೆ ಸೂಚನೆ

ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಜೂನ್ 2ರಂದು ಮಂಗಳವಾರ ಮಂಗಳೂರು ಸಹಾಯಕ ಆಯುಕ್ತರಾದ ಹರ್ಷವರ್ಧನ್ ಎಸ್.ಜೆ. ಅಧ್ಯಕ್ಷತೆಯಲ್ಲಿ  ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ ಇದ್ದಾಗ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯತ್ ಸಮನ್ವಯದೊಂದಿಗೆ ಐ.ಇ.ಸಿ. ಚಟುವಟಿಕೆಗಳನ್ನು ಹಮ್ಮಿಕೊಂಡು ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಸೇವನೆ ನಿಯಂತ್ರಿಸಲು ಆರೋಗ್ಯ ಇಲಾಖೆಯ ಜೊತೆ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಪಂಚಾಯತ್ ರಾಜ್  ಇಲಾಖೆ ಸಮನ್ವಯದೊಂದಿಗೆ ತಾಲೂಕು ಮಟ್ಟದಲ್ಲಿ ತಿಂಗಳಿಗೊಮ್ಮೆ ಕೋಟ್ಪಾ ಕಾರ್ಯಾಚರಣೆ ನಡೆಸಬೇಕು  ಎಂದು ಅವರು ಸೂಚಿಸಿದರು.

ಮಂಗಳೂರು ತಾಲೂಕಿನಲ್ಲಿ ಕೋಟ್ಪಾ ಕಾಯ್ದೆಯಡಿ ಡಿಸೆಂಬರ್ 2024 ರಿಂದ ಜೂನ್ 2025 ವರೆಗೆ 87 ಪ್ರಕರಣಗಳು ದಾಖಲಾಗಿದ್ದು, ಒಟ್ಟು 22700 ರೂಪಾಯಿ ದಂಡ ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 43 ದಡಾರ ರುಬೆಲ್ಲಾ ಸಂಶಯಾಸ್ಪದ ಪ್ರಕರಣಗಳು ದಾಖಲಾಗಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಹೆಚ್ಚು ಗಮನ ಹರಿಸಬೇಕು.  ಜ್ವರ, ದದ್ದುಗಳು ಕಂಡುಬಂದಲ್ಲಿ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ವರದಿ ಮಾಡುವಂತೆ ಅವರು ಸೂಚಿಸಿದರು. ಲಸಿಕಾ ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಮಾತನಾಡಿ, ಅತಿಸಾರ ನಿಯಂತ್ರಣ ಅಭಿಯಾನದಲ್ಲಿ  ಜನರಿಗೆ ಅತಿಸಾರದ ಕಾರಣ ಚಿಕಿತ್ಸೆ ತಡೆಗಟ್ಟುವಿಕೆಯ ಬಗ್ಗೆ ಮಾಹಿತಿ ನೀಡಲಾಗುತ್ತದೆ.  ಪ್ರಸ್ತುತ ಮಳೆಗಾಲದ ಸಂದರ್ಭದಲ್ಲಿ ಕಲುಷಿತ ನೀರಿನಿಂದ ಅಥವಾ ಪಾನೀಯ ಮುಂತಾದ ಆಹಾರ ಪದಾರ್ಥಗಳ ಸೇವನೆಯಿಂದ ಸೋಂಕು ಕಾಣಿಸಿಕೊಂಡು ಮಕ್ಕಳಲ್ಲಿ ಅತಿಸಾರ ಸಮಸ್ಯೆ ಉಂಟಾಗಬಹುದು. ಅತಿಸಾರವನ್ನು ತಡೆಗಟ್ಟಲು ಮನೆಗಳಲ್ಲಿ ಒ.ಆರ್.ಎಸ್ ಇಟ್ಟುಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳಿಗೆ ನೈರ್ಮಲ್ಯದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅಗತ್ಯ ಸೌಲಭ್ಯಗಳನ್ನು ಅವರಿಗೆ ನೀಡಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ   ಮಂಗಳೂರು ಗ್ರಾಮಾಂತರ  ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ. ಕಾರಿಗೆ,  ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ  ಮಹೇಶ್ ಹೊಳ್ಳ  ಮತ್ತಿತರರು ಉಪಸ್ಥಿತರಿದ್ದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page