May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಮು ಗಲಭೆಗಳ ಸಂದರ್ಭಗಳಲ್ಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸಲು ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತರಬೇತಿ

ಸಾಮಾಜಿಕ ಜಾಲತಾಣಗಳಲ್ಲಿ ತಾಂತ್ರಿಕ ನಿಗಾವಹಿಸುವ ಕುರಿತು ವಿಶೇಷ ತರಬೇತಿ

ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ ಕೋಮು ಗಲಭೆಗಳ ಸಂಧರ್ಭಗಳಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ Anti Riots gun & Stun Shell ನ್ನು ಉಪಯೋಗಿಸುವ ಬಗ್ಗೆ, ಜೂನ್ 02ರಂದು ಮಂಗಳೂರು ನಗರದ ನೆಹರೂ ಮೈದಾನದಲ್ಲಿ ತರಬೇತಿ ನೀಡಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು ಎಂದು ವಿಶೇಷ ಕಾರ್ಯಪಡೆಯ ಡಿಐಜಿ ಅವರು ತಿಳಿಸಿದ್ದಾರೆ.

ಈ ತರಬೇತಿ ಮತ್ತು ಪ್ರಾತ್ಯಕ್ಷಕೆಯಲ್ಲಿ ದಕ್ಷಿಣ ಕನ್ನಡ ಸೇರಿ ಮೂರು ಜಿಲ್ಲೆಗಳ ವಿಶೇಷ ಕಾರ್ಯಪಡೆ ಘಟಕದ 95 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ. ಅಲ್ಲದೇ ಗುಪ್ತಚರ ವಿಭಾಗದ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುವ ದ್ವೇಷ ಭಾಷಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವ ಕುರಿತು ಪರಿಣಾಮಕಾರಿಯಾಗಿ ತರಬೇತಿಯನ್ನು ನೀಡಲಾಗಿದ್ದು, ಕಾರ್ಯಪ್ರವೃತ್ತಿಗೆ ಸನ್ನದ್ದರಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page