ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ರವರಿಗೆ “ಡಿ” ವರ್ಗ ಸರ್ಕಾರಿ ನೌಕರ ಸಂಘದ ವತಿಯಿಂದ ಸನ್ಮಾನ
ದಕ್ಷಿಣ ಕನ್ನಡ ಜಿಲ್ಲೆಯ ನೂತನವಾಗಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ “ಡಿ” ವರ್ಗ ಸರ್ಕಾರಿ ನೌಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಪ್ರವೀಣ್ ಎಸ್., ಪ್ರಧಾನ ಕಾರ್ಯದರ್ಶಿ ನಾಗೇಶ್, ಮುಖ್ಯ ಸಲಹೆಗಾರ ಫ್ರ್ಯಾಂಕಿ ಫ್ರಾನ್ಸಿಸ್ ಕುಟಿನ್ಹಾ, ಕ್ರೀಡಾ ಕಾರ್ಯದರ್ಶಿ ಲೋಕೇಶ್, ಶಾಂತಾ, ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.




