May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿ ಅಂಬೇಡ್ಕರ್ ಭವನ ನಿರ್ಮಾಣ ಯೋಜನೆ ಕಾಮಗಾರಿಗೆ ರೂಪಾಯಿ ಮೂರು ಕೋಟಿ ಅನುದಾನ

ಬೆಳ್ತಂಗಡಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಯೋಜನೆ ಕಾಮಗಾರಿಗೆ ಕರ್ನಾಟಕ ರಾಜ್ಯ ಸರಕಾರ ರೂಪಾಯಿ ಮೂರು ಕೋಟಿ ಅನುದಾನ ಮಂಜೂರುಗೊಳಿಸಿದೆ.

ಅನುದಾನ ಮಂಜೂರುಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ತಾಲೂಕು ಅಕ್ರಮ ಸಕ್ರಮ ಸಮಿತಿಯ ನಾಮನಿರ್ದೇಶಿತ ಸದಸ್ಯ ಶ್ರೀಧರ್ ಕಳೆಂಜ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ನೇಮಿರಾಜ ಕಿಲ್ಲೂರು ಉಪಸ್ಥಿತರಿದ್ದರು.

You may also like

News

Mumbai Archbishop Cardinal Oswald Gracias Offers Solace to Residents of Saint Anthony’s Ashram

MANGALURU: His Eminence Cardinal Oswald Gracias, Archbishop of Mumbai and a member of the Pope’s Council of Cardinals, paid a
News

ಸೂರಿಕುಮೇರು – ಮಾಣಿಯಲ್ಲಿ ಅದ್ದೂರಿ ‘ಅನ್ಫಾಲ್ ರೆಸ್ಟೋರೆಂಟ್’ ಮೇ 3ರಂದು ಉದ್ಘಾಟನೆ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಭಾಗಿ ಉದ್ಘಾಟನಾ ಭವ್ಯ ಸಮಾರಂಭದಲ್ಲಿ ಮೂವರು ಸಾಧಕರಾದ ಚೇತನ್ ರೈ, ನಾಗರಾಜ್ ಶೆಟ್ಟಿ ಹಾಗೂ ಯಾಸೀರ್ ಕಲ್ಲಡ್ಕ

You cannot copy content of this page