September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳ ಗ್ರಾಮ ಪಂಚಾಯತ್ ಐದು ವರ್ಷದ ಸಾಧನೆ ಬಗ್ಗೆ ಪತ್ರಿಕಾಗೋಷ್ಠಿ

ಧರ್ಮಸ್ಥಳ 8 ವಾರ್ಡ್ ಗಳನ್ನು ಹೊಂದಿದ್ದು 7083 ಹೆಕ್ಟೇರ್ ಭೌಗೋಳಿಕ ವಿಸ್ತೀರ್ಣ ಹೊಂದಿದೆ. 1150 ಎಕ್ರೆ ಕೃಷಿ ಭೂಮಿಯನ್ನು ಹೊಂದಿದ್ದು, ಮಂಡಲ ಪಂಚಾಯತ್ ನಿಂದ ಆರಂಭಿಸಿ ಗ್ರಾಮದ ಅಭಿವೃದ್ಧಿ ಜನಗಳಿಗೆ ಮುಟ್ಟುವ ನೆಲೆಯಲ್ಲಿ ಕಳೆದ ಐದು ವರ್ಷಗಳಿಂದ ಪಾರದರ್ಶಕವಾಗಿ ಪರಿಣಾಮಕಾರಿಯಾಗಿ ಮಾಡಿದ್ದೇವೆ ಎಂದು ಜುಲಾಯ್ 9ರಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸ್ವಚ್ಛತೆ ಬಗ್ಗೆ ವಿಶೇಷ ಕಾಳಜಿ ಕೈಗೊಂಡಿದ್ದೇವೆ. ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಗ್ರಾಮ ಪಂಚಾಯತ್ ಮಾಡುವ ನೆಲೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಆಗಸ್ಟ್ 2ರಂದು 2013ರಲ್ಲಿ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಏಕಬಳಕೆಯ ಮುಕ್ತ ಗ್ರಾಮವಾಗಿ ಘೋಷಣೆ ಮಾಡಿದ ಮೂಲಕ ನಿರಂತರ ಕೆಲಸ ಮಾಡುತ್ತಾ ಬಂದಿದ್ದೇವೆ. ಗ್ರಾಮದಲ್ಲಿ 9818 ಜನಸಂಖ್ಯೆ ಹೊಂದಿದ್ದು, 2858 ಕುಟುಂಬಗಳಿವೆ. 2518 ವಾಸ್ತವ್ಯ ಮನೆಗಳಿದ್ದು, 484 ವಾಣಿಜ್ಯ ಕಟ್ಟಡಗಳಿವೆ. ಗ್ರಾಮ ಪಂಚಾಯತ್ ನಿರ್ಮಲ ಗ್ರಾಮ ಪುರಸ್ಕಾರ, ಗಾಂಧಿ ಗ್ರಾಮ ಪುರಸ್ಕಾರ, ಸ್ವಚ್ಛತಾ ಹೀ ಸೇವಾ, ಡಾಕ್ಟರ್ ಶಿವರಾಮ ಕಾರಂತ ಪ್ರಶಸ್ತಿ ಪಡೆದಿದೆ. ತೆರಿಗೆ ಸಂಗ್ರಹದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಒಟ್ಟು 1.55 ಕೋಟಿ ರೂಪಾಯಿ ತೆರಿಗೆಯಲ್ಲಿ 1.06 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ.

ಕೇಂದ್ರ ಸರ್ಕಾರದ 15ನೇ ಹಣಕಾಸು ಯೋಜನೆಯಡಿ 1.18 ಕೋಟಿ ರೂಪಾಯಿ ಬಂದಿದೆ. ಪಂಚಾಯತ್ ನಿಧಿಯಡಿ 4.77 ಕೋಟಿ ರೂಪಾಯಿ ಕಾಮಗಾರಿ ನಡೆಸಲಾಗಿದೆ. 273 ಮಂದಿ ಒಟ್ಟು ಅರ್ಹ ನಿವೇಶನ ರಹಿತರಿದ್ದಾರೆ. ರಸ್ತೆ ಕಾಂಕ್ರೀಟ್, ತಡೆಗೋಡೆ, ಕಟ್ಟಡ ನಿರ್ಮಾಣ, ನೀರು ನಿರ್ವಹಣೆ, ಮೋರಿ ರಚನೆ ಸಹಿತ 6.75 ಕೋಟಿ ರೂಪಾಯಿ ವ್ಯಯಿಸಲಾಗಿದೆ. ರಾಜ್ಯಸಭಾ ನಿಧಿಯಡಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಶೋಕ ನಗರ ಹಾಗೂ ಮುಳಿಕ್ಕಾರಿಗೆ 2.50 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿಮಲಾ, ಪಿಡಿಒ ದಿನೇಶ್ ಎಂ., ಲೆಕ್ಕ ಸಹಾಯಕಿ ಪ್ರಮೀಳಾ, ಸದಸ್ಯೆ ಸುನಿತಾ, ಸಿಬ್ಬಂದಿ ದೇವಿಪ್ರಸಾದ್ ಬೊಳ್ಮ ಉಪಸ್ಥಿತರಿದ್ದರು.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page