June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕದಲ್ಲಿನ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ – ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  

ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಬಲ ನೀಡಲು LKG ಯಿಂದ PUC ತನಕ ಕರ್ನಾಟಕ ಸರಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಹಾಜರಾತಿ ಹಾಗೂ ಗುಣಮಟ್ಟ ಹೆಚ್ಚಿಸಲು, ಉಚಿತ ಬಸ್ ವ್ಯವಸ್ಥೆಯನ್ನು ನೀಡಲು ಕರ್ನಾಟಕ ರಾಜ್ಯ ಸರಕಾರವು ಉದ್ದೇಶಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಈ ಉಚಿತ ಬಸ್ ಪ್ರಯಾಣದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಕರ್ನಾಟಕ ರಾಜ್ಯ ಸರಕಾರದ ದಿಟ್ಟ ಹೆಜ್ಜೆಯೂ ಇದಾಗಿದೆ ಎಂದು ಅವರು ತಮ್ಮ ಎಕ್ಸ್ ಪೋಸ್ಟಿನಲ್ಲಿ ಹಂಚಿಕೊಂಡಿದ್ದಾರೆ. ಸರಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಹಾಗೂ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಕಾಂಗ್ರೆಸ್‌ ಪಕ್ಷದ ನೇತೃತ್ವದ ರಾಜ್ಯ ಸರ್ಕಾರದ ಈ ಮಹತ್ವದ ಘೋಷಣೆಯನ್ನು ವಿದ್ಯಾರ್ಥಿಗಳು ಹಾಗೂ ಹೆತ್ತವರು ಸಂತೋಷದಿಂದ ಸ್ವೀಕರಿಸಿದ್ದಾರೆ.

You may also like

News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ
News

ಮಂಗಳೂರು ಧರ್ಮಕ್ಷೇತ್ರದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ 2026-27ಕ್ಕೆ ಅದ್ಧೂರಿ ಚಾಲನೆ!

ಜ್ಞಾನದ ದೀವಿಗೆ ಹಚ್ಚಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಯಾವುದೇ ಒಂದು ಸಮಾಜದ ಸತ್ಪ್ರಜೆಗಳ ನಿರ್ಮಾಣಕ್ಕೆ ಮತ್ತು ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತಲು ಧಾರ್ಮಿಕ ಶಿಕ್ಷಣವು

You cannot copy content of this page