November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಾರೂಖ್‌ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ – ಮಂಗಳೂರಿನಲ್ಲಿ ಕಾರ್ಯಕ್ರಮ

ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12ರಂದು ಶನಿವಾರ ಘೋಷಣೆ ಮಾಡಿತು.

ಈ ಬಹು ನಿರೀಕ್ಷಿತ ಕಾರ್ಯಕ್ರಮವು, ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಸಿನಿಮಾ ಜಗತ್ತಿನ ತಾರೆಗಳು ಭಾಗವಹಿಸಿದ್ದರು.

ಈ ಘೋಷಣೆ ವಿಶೇಷ ಏಕೆಂದರೆ – ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ಶಾರೂಖ್‌ ಖಾನ್ ಅವರು ಯಾವುದೇ ಬ್ರಾಂಡ್‌ಗೆ ಅಂಬಾಸಿಡರ್ ಆಗಿರುವುದು. ಈ ಮೂಲಕ ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಸಮಾರಂಭದ ಪ್ರಮುಖ ಆಕರ್ಷಣೆ ಎಂದರೆ ಬೃಹತ್ ಪರದೆಯ ಮೇಲೆ ಪ್ರದರ್ಶಿಸಲಾದ ಅಧಿಕೃತ ಬ್ರಾಂಡ್ ಅಂಬಾಸಿಡರ್ ವಿಡಿಯೋ (AV). ಈ ವಿಡಿಯೋದಲ್ಲಿ ರೋಹನ್ ಕಾರ್ಪೊರೇಷನ್‌ನ ಸ್ಫೂರ್ತಿದಾಯಕ ಪಯಣ ಮತ್ತು ಶಾರೂಖ್‌ ಖಾನ್ ಅವರ ಶ್ರಮ ಮತ್ತು ವ್ಯಕ್ತಿತ್ವ ತುಂಬಿದ ಯಶೋಗಾಥೆ ಅದ್ಭುತವಾಗಿ ಪ್ರಸ್ತುತಗೊಂಡಿತ್ತು.

ಸಂಸ್ಥಾಪಕರಾದ ಡಾ. ರೋಹನ್ ಮೊಂತೇರೊ ಅವರು ಈ ಸಂದರ್ಭದಲ್ಲಿ ಮಾತನಾಡಿ “ಶಾರೂಖ್‌ ಖಾನ್ ಅವರಂತಹ ಪ್ರಭಾವಿ ವ್ಯಕ್ತಿತ್ವ ನಮ್ಮ ಜೊತೆಗೆ ಇರುವುದರಿಂದ, ನಮ್ಮ ಯಶಸ್ಸನ್ನು ಇನ್ನೂ ಎತ್ತರಕ್ಕೆ ವಿಸ್ತರಿಸುವಲ್ಲಿ ಹೊಸ ಆತ್ಮವಿಶ್ವಾಸ ಬಂದಿದೆ. ಇದು ಶಕ್ತಿಯುತ ಸಹಭಾಗಿತ್ವದ ಹೊಸ ಅಧ್ಯಾಯದ ಪ್ರಾರಂಭ”ಎಂದರು. ಕಾರ್ಯಕ್ರಮವನ್ನು ಖ್ಯಾತ ನಿರೂಪಕಿ ರೀನಾ ಡಿಸೋಜ ಅವರು ಆಕರ್ಷಕವಾಗಿ ನಿರೂಪಿಸಿದರು. ಈ ಘೋಷಣೆ ಕೇವಲ ಬ್ರಾಂಡ್ ಪ್ರಚಾರವಲ್ಲ, ಇದು ಮಂಗಳೂರಿನ ಅಭಿವೃದ್ಧಿಯ ಹಾದಿಯಲ್ಲಿ ಮತ್ತೊಂದು ಸಾಂದರ್ಭಿಕ ಹೆಜ್ಜೆ. 32 ವರ್ಷಗಳ ಅನುಭವ, 5000ಕ್ಕೂ ಹೆಚ್ಚು ಸಂತುಷ್ಟ ಕುಟುಂಬಗಳು, ಮತ್ತು 25ಕ್ಕೂ ಹೆಚ್ಚು ಯಶಸ್ವಿ ಯೋಜನೆಗಳೊಂದಿಗೆ, ರೋಹನ್ ಕಾರ್ಪೊರೇಷನ್ ಇದೀಗ ಒಂದು ಜಾಗತಿಕ ಹಾದಿಗೆ ಕಾಲಿಟ್ಟಿದೆ.

ರೋಹನ್ ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page