July 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಳು ರಂಗಭೂಮಿ ಕಲಾವಿದ ಮಾಣಿ ಕಾಪಿಕಾಡು ನಿವಾಸಿ ಮೌನೇಶ ಆಚಾರ್ಯ ಇನ್ನಿಲ್ಲ

ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಮಾಣಿ ಕಾಪಿಕಾಡು‌ ನಿವಾಸಿ 44 ವರ್ಷ ಪ್ರಾಯದ ಮೌನೇಶ ಆಚಾರ್ಯ ಮಾಣಿ ಇವರು ಇಂದು ಜುಲಾಯ್ 15ರಂದು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆ ಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ ಉಳ್ಳವರಾಗಿದ್ದ ಇವರು ಜಯಂ ಕಲಾನಿಕೇತನ ಮಾಣಿ ನೃತ್ಯ ತಂಡದಲ್ಲಿ ಕಲಾವಿದರಾಗಿದ್ದ ಇವರು ಕಲಾಮಾತೆ ನಾಗನವಳಚ್ಚಿಲ್ ತಂಡದ ಕಲಾವಿದರಾಗಿದ್ದು, ಶಾಂತರಾಮ್ ಕಲ್ಲಡ್ಕ ನಿರ್ದೇಶನದ ತುಳು ಅಪ್ಪೆಜೋಕ್ಲು ಕಲಾ ಬಳಗದ ನಾಟಕಗಳಲ್ಲಿಯೂ ಅಭಿನಯಿಸಿದ್ದರು.‌

ಪ್ರಸ್ತುತ ನಮ್ಮ‌ಕಲಾವಿದರು ನೆಲ್ಯಾಡಿ ತುಳುನಾಟಕ ತಂಡದ ಕಲಾವಿದರಾಗಿದ್ದ ಇವರು, ಯುವ ಕಲಾವಿದ ಸಚಿನ್ ಮಾಣಿಯವರ ಹಲವು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದವರು. ಸ್ನೇಹಜೀವಿಯಾಗಿದ್ದ ಇವರ ಅಗಲಿಕೆ ಗ್ರಾಮದಲ್ಲಿ ಆಘಾತಕ್ಕೆ ಕಾರಣವಾಗಿದೆ. ಮೃತರು ತಾಯಿ, ಸಹೋದರ, ಪತ್ನಿ, ಪುಟ್ಟಮಗಳು ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

You may also like

News

Father Muller Homoeopathic Medical College Hosts Dr M.L. Dhawale Memorial Seminar 2026

The Department of Practice of Medicine, Father Muller Homoeopathic Medical College & Hospital, Deralakatte, Mangalore, organised the Dr M.L. Dhawale
News

ರೊಜಾರಿಯೊ ಕ್ಯಾಥೆಡ್ರಲ್‌ನಲ್ಲಿ ಹೃದಯ ಆರೋಗ್ಯ ಜಾಗೃತಿ ಹಾಗೂ ಸಿಪಿಆರ್ ತರಬೇತಿ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ರೊಜಾರಿಯೊ ಕ್ಯಾಥೆಡ್ರಲ್‌ನ ಆರೋಗ್ಯ ಆಯೋಗವು ಚರ್ಚ್ ಪಾಲನಾ ಸಮಿತಿಯ 21 ಆಯೋಗಗಳ ಸಹಯೋಗದಲ್ಲಿ “A Healthy Heart for a Blessed Life”

You cannot copy content of this page