ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ
ಕಡಬ ತಾಲೂಕಿನ ಚೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿದಿದ್ದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (ಸಂಖ್ಯೆ 75) ವಾಹನಗಳು ಚಲಿಸಲು ಪ್ರಸ್ತುತ ಸಾಧ್ಯವಿಲ್ಲ.



ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನ ವರೆಗೆ ಇರುವುದರಿಂದ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಲು ವಿನಂತಿಸಲಾಗಿದೆ.




