November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ಜುಲಾಯ್ 16ರಂದು ಬುಧವಾರ ಜರಗಿತು. ಶಾಲಾ ಸಂಚಾಲಕರಾದ ವಂದನೀಯ ಫಾದರ್ ಎಡ್ವಿನ್ ಸಂತೋಷ್ ಮೋನಿಸ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿವೃತ್ತ ಶಿಕ್ಷಕ ಎಲ್.ಜೆ. ಫೆರ್ನಾಂಡಿಸ್ ರವರು ಮಕ್ಕಳ ಶಿಕ್ಷಣದಲ್ಲಿ ಹೆತ್ತವರ ಪಾತ್ರದ ಬಗ್ಗೆ ಮಾತಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಂದನೀಯ ಫಾದರ್ ಎಡ್ವಿನ್ ಸಂತೋಷ್ ಮೋನಿಸ್ ರವರು ಸಹಕಾರಕ್ಕಾಗಿ ಹೆತ್ತವರನ್ನು ಅಭಿನಂದಿಸಿದರು. ಶಾಲಾ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಪಿರೇರಾ ಸರ್ವರನ್ನು ಸ್ವಾಗತಿಸಿದರು. ಸುಮಲತಾ ವರದಿಯನ್ನು ವಾಚಿಸಿದರು. ಶಿಕ್ಷಕಿ ಮೀನಾ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು. ಸುಪ್ರೀತ ವಂದಿಸಿದರು. ದಿನೇಶ್ ಗೌಡ, ಪಂಚಾಯತ್ ಸದಸ್ಯ ಜಿನ್ನು ಮತ್ತು ಗಾಯತ್ರಿ ಉಪಸ್ಥಿತರಿದ್ದರು.

You may also like

News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್
News

ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್. ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಜರಗುವ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್.  ಆಯ್ಕೆಯಾಗಿರುತ್ತಾನೆ.

You cannot copy content of this page