ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ
ನಮ್ಮ ದೇಶದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರವರು ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮುರವರಿಗೆ ಸಲ್ಲಿಸಿದ್ದಾರೆ. ಧನ್ಕರ್ ರವರು ರಾಜೀನಾಮೆ ಪತ್ರದಲ್ಲಿ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಲು ಹಾಗೂ ವೈದ್ಯಕೀಯ ಸಲಹೆಯನ್ನು ಪಾಲಿಸಬೇಕಿರುವುದರಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಸಂವಿಧಾನದ ವಿಧಿ 67(ಎ) ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತೇನೆ,” ಎಂದು ಅವರು ತಾವು ನೀಡಿದ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜಗದೀಪ್ ಧನ್ಕರ್ ರವರು 2022ರಲ್ಲಿ ಉಪ ರಾಷ್ಟ್ರಪತಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದರು.




