ವಕೀಲರ ಸಂಘ (ರಿ.) ಬಂಟ್ವಾಳ ಇದರ ವತಿಯಿಂದ ಕಾನೂನು ಮಾಹಿತಿ ಕಾರ್ಯಗಾರ
ವಕೀಲರ ಸಂಘ (ರಿ.) ಬಂಟ್ವಾಳ ಇದರ ವತಿಯಿಂದ ಕಾನೂನು ಮಾಹಿತಿ ಕಾರ್ಯಗಾರ ಮತ್ತು ಸೇವಾ ನಿವೃತ್ತಿ ಹೊಂದುತ್ತಿರುವ ಶಿರಸ್ತೇದಾರ ಕೆ. ಬಾಲಕೃಷ್ಣರವರಿಗೆ ಗೌರವಾರ್ಪಣಾ ಕಾರ್ಯಕ್ರಮ ಬಿ.ಸಿ. ರೋಡಿನ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಕಟ್ಟಡದ ವಕೀಲರ ಸಂಘದ ಹಾಲ್‌ನಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ಬಂಟ್ವಾಳದ ನ್ಯಾಯಧೀಶರಾದ ಅನಿಲ್ ಪ್ರಕಾಶ್ ಎಂ.ಪಿ.ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಯುವ ವಕೀಲರುಗಳಿಗೆ ಮಾಹಿತಿ ಕಾರ್ಯಾಗಾರಗಳು ಹೆಚ್ಚು ಪ್ರಯೋಜನ ಪಡೆಯಲು ಸಾಧ್ಯ ಎಂದು ತಿಳಿಸಿದರು. ಇಂತಹ ಸಂದರ್ಭಗಳಲ್ಲಿ ಎಲ್ಲರು ಭಾಗವಹಿಸಿ, ಸದುಪಯೋಗ ಪಡೆಯಲು ತಿಳಿಸಿದರು. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಲಿ ಎಂದು ಆಶಿಸಿದರು.

ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ಬಂಟ್ವಾಳದ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್.ರವರು ಮಾತನಾಡಿ, ಲೋಕಾಅದಾಲತ್ ಮೂಲಕ ಅನೇಕ ಪ್ರಕರಣಗಳು ಇತ್ಯರ್ಥಕ್ಕೆ ಸಹಕಾರಿಯಾಗಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಕರಣಗಳ ಶೀಘ್ರ ಇತ್ಯರ್ಥವಾಗುವುದಕ್ಕೆ ಸಹಕಾರ ಇರಲಿ ಎಂದು ಅವರು ತಿಳಿಸಿದರು. ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ಬಂಟ್ವಾಳದ ನ್ಯಾಯಧೀಶರಾದ ರಾಜೇಂದ್ರ ಪ್ರಸಾದ್ ಕೆ.ಎಸ್.ರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘ (ರಿ.) ಬಂಟ್ವಾಳದ ಅಧ್ಯಕ್ಷ ರಿಚಾರ್ಡ್ ಕೋಸ್ತ ಎಂ.ರವರು ಮಾತನಾಡಿ ನಿವೃತ್ತಿ ಹೊಂದಿದ ಬಾಲಕೃಷ್ಣರವರು ಬಂಟ್ವಾಳ ನ್ಯಾಯಾಲಯಕ್ಕೆ ಅಪಾರವಾದ ಸೇವೆ ನೀಡಿದ್ದಾರೆ ಎಂದು ಬಣ್ಣಿಸಿದರು.

ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ಬಂಟ್ವಾಳ ನ್ಯಾಯಾಲಯದ ಶಿರಸ್ತೇದಾರ ಕೆ.ಬಾಲಕೃಷ್ಣ ಅವರನ್ನು ಗೌರವಿಸಲಾಯಿತು. ನ್ಯಾಯಾಲಯದಲ್ಲಿ ದಾವೆ, ಪ್ರಕರಣಗಳನ್ನು ದಾಖಲಿಸುವ ಬಗ್ಗೆ ಪಾಲಿಸಬೇಕಾದ ನಿಯಮಗಳು ಮತ್ತು ದಾವಾ ಶುಲ್ಕಗಳ ಪಾವತಿ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿದ್ದ ಬಂಟ್ವಾಳ ನ್ಯಾಯಾಲಯದ ಹಿರಿಯ ಶಿರಸ್ತೇದಾರರು ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ಪ್ರಕಾಶ್ ನಾಯಕ್ ರವರಿ ಮಾಹಿತಿ ನೀಡಿದರು. ವಕೀಲರ ಸಂಘದ (ರಿ.) ಇದರ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ ಕೆ. ನರೇಂದ್ರನಾಥ ಭಂಡಾರಿ, ಜೊತೆ ಕಾರ್ಯದರ್ಶಿ ಅಕ್ಷತಾ ಶೆಟ್ಟಿ ಧನ್ಯವಾದ ನೀಡಿದರು. ಯುವ ವಕೀಲೆ ಸ್ವರ್ಣಗೌರಿ ಕಾರ್ಯಕ್ರಮ ನಿರೂಪಿಸಿದರು.




