November 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎನ್.ಎಸ್.ಯು.ಐ. ವತಿಯಿಂದ “ನಮ್ಮೂರ ಹೆಮ್ಮೆ” ಶೈಕ್ಷಣಿಕ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ.) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಇದರ ವತಿಯಿಂದ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ “ನಮ್ಮೂರ ಹೆಮ್ಮೆ” ಕಾರ್ಯಕ್ರಮವು ಬಿ.ಸಿ. ರೋಡಿನ ಅಂಬೆಡ್ಕರ್ ಭವನದಲ್ಲಿ ಜುಲಾಯಿ 27ರಂದು ಭಾನುವಾರ ಸಂಜೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ದೇಶದ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ವಿವಿಧತೆಯಲ್ಲಿ ಏಕತೆಯನ್ನು ಮೈಗೂಡಿಸಿಕೊಂಡು ದೇಶದಲ್ಲಿರುವ ಸರ್ವ ಧರ್ಮ, ಜಾತಿ, ಜನಾಂಗದವರ ಜೊತೆ ಪ್ರೀತಿ ವಿಶ್ವಾಸ ಅನ್ಯೋನ್ಯತೆಯಿಂದ ಜೀವಿಸಲು ಎನ್.ಎಸ್.ಯು.ಐ. ಪ್ರೇರಣೆಯಾಗಿದೆ, ಎನ್.ಎಸ್.ಯು.ಐ. ಯಲ್ಲಿ ತೊಡಗಿಸಿಕೊಂಡ ಅನೇಕ ಮಂದಿ ಇಂದು ರಾಜಕೀಯ ಸಾಮಾಜಿಕ ರಂಗದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್, ಸದಸ್ಯರಾದ ಪಿಯೂಸ್ ಎಲ್. ರೊಡ್ರಿಗಸ್,   ಚಂದ್ರಪ್ರಕಾಶ್ ಶೆಟ್ಟಿ ತುಂಬೆ,   ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ನೋಟರಿ, ನ್ಯಾಯವಾದಿ ಅಶ್ವಿನಿ ಕುಮಾರ್ ರೈ, ಎನ್.ಎಸ್.ಯು.ಐ. ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಬೆ, ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸುರಯ್ಯಾ ಅಂಜುಮ್, ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು ಮಾತನಾಡಿ ಶುಭ ಹಾರೈಸಿದರು. ಪಕ್ಷ ಪ್ರಮುಖರಾದ ಪದ್ಮಶೇಖರ ಜೈನ್, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಬಿ.ಎಂ. ಅಬ್ಬಾಸ್ ಅಲಿ, ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು, ವಿನಯಕುಮಾರ್ ಸಿಂಧ್ಯಾ, ಫಾರೂಕ್ ಪೆರ್ನೆ, ಸುಖ್ವೀಂದರ್ ಸಿಂಗ್, ಶಾನ್ ಸಿರಿ, ಕೆ. ಪದ್ಮನಾಭ ರೈ, ಸುಧಾಕರ ಶೆಣೈ ಖಂಡಿಗ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಂತಿ ವಿ. ಪೂಜಾರಿ, ಶೈಲಜಾ ರಾಜೇಶ್, ಲವೀನಾ ವಿಲ್ಮಾ ಮೊರಾಸ್, ಉದ್ಯಮಿ ಸಲಾಂ ಸಮ್ಮಿ, ಪ್ರಜ್ವಲ್ ಶೆಟ್ಟಿ, ಮುಹಮ್ಮದ್ ನಂದಾವರ, ಅರ್ಶದ್ ಸರವು, ಸಿರಾಜ್ ಮದಕ, ಸಿದ್ದೀಕ್ ಸರವು, ಸಮದ್ ಕೈಕಂಬ, ವೆಂಕಪ್ಪ ಪೂಜಾರಿ, ಯೂಸುಫ್ ಕರಂದಾಡಿ, ಮೋನು ನಂದಾವರ, ಶಫೀಕ್ ಗೂಡಿನ ಬಳಿ ಮೊದಲಾದವರು ಭಾಗವಹಿಸಿದ್ದರು.

ಎನ್.ಎಸ್.ಯು.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮುಹಮ್ಮದ್ ಸಫ್ವಾನ್ ಸ್ವಾಗತಿಸಿ, ಉಪಾಧ್ಯಕ್ಷ ಶ್ರೀವತ್ಸ ಕಲ್ಲಡ್ಕ ವಂದಿಸಿದರು. ಪದಾಧಿಕಾರಿಗಳಾದ ನಿಹಾಲ್ ನೆಹರುನಗರ, ಸಿದ್ದೀಕ್ ಕೋಡಪದವು, ಸವಾದ್ ವಾಮದಪದವು, ಸಲ್ಮಾನ್ ಬೊಳ್ಳಾಯಿ, ಪವನ್ ಬೊಳ್ಳಾಯಿ, ನಜೀಬ್ ಮಂಚಿ, ಸಾದಿಕ್ ತಾಳಿತ್ತನೂಜಿ, ಜಂಶೀದ್ ಮೂಲರಪಟ್ನ ಸಹಕರಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page