170ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ನಲ್ಲಿ ಹೆಸರು ದಾಖಲಿಸಿದ ಮಂಗಳೂರಿನ ರೆಮೋನಾ ಪಿರೇರಾ
ಕಥೊಲಿಕ್ ಸಭಾ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ

ಏಳು ದಿನಗಳ ಕಾಲ ನಿರಂತರ ನೃತ್ಯದೊಂದಿಗೆ 170 ಗಂಟೆ ಸತತವಾಗಿ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ನಲ್ಲಿ ಹೆಸರು ದಾಖಲಿಸಿದ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾರವರನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಅಭಿನಂದನೆಗಳನ್ನು ಸಲ್ಲಿಸಿದೆ.

ಜುಲಾಯಿ 21ರ ಸೋಮವಾರ ಬೆಳಗ್ಗಿನಿಂದ ಮೊದಲ್ಗೊಂಡು ಜುಲಾಯಿ 28ರ ಸೋಮವಾರ ಸಂಜೆಯ ತನಕ ಏಳು ದಿನ ಹಗಲು ರಾತ್ರಿ ನಿರಂತರವಾಗಿ ಭರತನಾಟ್ಯದ ವಿವಿಧ ಪ್ರಕಾರಗಳಾದ ಅಲೆರಿಪ್ಪು, ಜತಿಸ್ವರಂ, ಶಬ್ದಂ, ವರ್ಣಂ, ಪದಂ, ತಿಲ್ಲಾನಗಳ ಜತೆಗೆ ಸೆಮಿಕ್ಲಾಸಿಕ್, ದೇವರ ನಾಮಗಳಿಗೆ ಭರತನಾಟ್ಯ ಪ್ರದರ್ಶನ ನೀಡಿದ ರೆಮೋನಾ ಪಿರೇರಾರವರ ಸಾಧನೆ ಅಸಾಧಾರಣವಾದುದು. ಈ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಅವರು ಈ ನಾಟ್ಯ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ ಉತ್ತುಂಗಕ್ಕೇರಲಿ ಎಂದು ಕಥೊಲಿಕ್ ಸಭಾ ಶುಭ ಹಾರೈಸುತ್ತದೆ. ಜತೆಗೆ ರೆಮೊನಾರವರಿಗೆ ಈ ಸಾಧನೆ ಮಾಡಲು ಅವಕಾಶ ಮಾಡಿಕೊಟ್ಟ ಮಂಗಳೂರಿನ ಸೈಂಟ್ ಅಲೋಶಿಯಸ್ ವಿಶ್ವ ವಿದ್ಯಾನಿಲಯ ಪರಿಗಣಿತ ಹಾಗೂ ನೃತ್ಯ ಗುರಿ ವಿದ್ಯಾ ಮುರಳೀಧರ್ ರವರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಮತ್ತು ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



