ಛತ್ತೀಸ್‌ಗಢದಲ್ಲಿ ಕೇರಳದ ಇಬ್ಬರು ಕ್ರೈಸ್ತ ಸನ್ಯಾಸಿನಿಯರ ಬಂಧನ
ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಖಂಡನೆ

ಛತ್ತೀಸ್‌ಗಢದಲ್ಲಿ ಕೇರಳದ ಕ್ರೈಸ್ತ ಸನ್ಯಾಸಿಯರನ್ನು ಬಂಧಿಸಿರುವ ಘಟನೆಯನ್ನು ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ತೀವ್ರವಾಗಿ ಖಂಡಿಸುತ್ತದೆ. ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕ್ಯುಲೇಟ್ ಆಫ್ ಅಸ್ಸಿಸಿಯ ಸದಸ್ಯರಾದ ತಲಶ್ಶೇರಿಯ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಅಂಗಮಾಲಿಯ ಸಿಸ್ಟರ್ ಪ್ರೀತಿ ಮೇರಿ ಎಂಬ ಇಬ್ಬರು ಮಲಯಾಳಿ ಕಥೊಲಿಕ್ ಸನ್ಯಾಸಿನಿಯರನ್ನು ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ 18 ರಿಂದ 19 ವರ್ಷದೊಳಗಿನ ಮೂವರು ಮಹಿಳೆಯರು, ಒಬ್ಬ ಯುವಕನೊಂದಿಗೆ ಹೋಗುತ್ತಿದ್ದಾಗ ಬಂಧಿಸಿ ಅವರ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಛತ್ತೀಸ್‌ಗಢ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 1968 ರ ಅಡಿಯಲ್ಲಿ ಮಾನವ ಕಳ್ಳಸಾಗಣೆ ಮತ್ತು ಧಾರ್ಮಿಕ ಮತಾಂತರದ ಆರೋಪ ಹೊರಿಸಿರುವುದು ಆಘಾತಕಾರಿ ಸಂಗತಿಯಾಗಿದೆ.

ಮನೆ ಕೆಲಸಕ್ಕಾಗಿ ಮಹಿಳೆಯರನ್ನು ಕರೆದೊಯ್ಯುತ್ತಿದ್ದಾಗ ಅದಕ್ಕೆ ತಡೆಯೊಡ್ಡಿ ಮತಾಂತರ ಆರೋಪ ಹೊರಿಸಿರುವುದು ಖಂಡನೀಯ. ಕ್ರೈಸ್ತ ಸನ್ಯಾಸಿನಿಯರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡಬೇಕು. ಹಾಗೂ ಆವರನ್ನು ಬಂಧಿಸಲು ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಮತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.




