May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಿಂದ ಗಣೇಶ ಹಬ್ಬದ ಶಾಂತಿ ಹಾಗೂ ಸೌಹಾರ್ದತೆಯಿಗಾಗಿ ವಿಶೇಷ ಸಭೆ

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 2025ರ ಗಣೇಶ ಹಬ್ಬದ ನಿಮಿತ್ತ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಇಂದು ಆಗಸ್ಟ್ 11ರಂದು ಸೋಮವಾರ ವಿಶೇಷ ಸಭೆ ನಡೆಯಿತು. ಭಟ್ಕಳ ಗ್ರಾಮೀಣ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಮಂಜುನಾಥ ಅರ್ಜುನ ಲಿಂಗಾರೆಡ್ಡಿ, ಸಬ್ ಇನ್ಸ್ ಪೆಕ್ಟರ್‌ಗಳಾದ ರನ್ನಗೌಡ ಮತ್ತು ಭರಮಪ್ಪ ಅವರ ನೇತೃತ್ವದಲ್ಲಿ ಈ ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಗ್ರಾಮಗಳ ಗಣೇಶೋತ್ಸವ ಸಮಿತಿಯ ಸದಸ್ಯರು, ಗ್ರಾಮಸ್ಥರು ಹಾಗೂ ವಿವಿಧ ಸಮುದಾಯದ ಮುಖಂಡರು ಭಾಗವಹಿಸಿದ್ದರು. ಪೊಲೀಸ್ ಇಲಾಖೆ ಈ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಭದ್ರತೆ ಹಾಗೂ ಕೋಮು ಸೌಹಾರ್ದತೆ ಕಾಪಾಡಲು ಹಲವು ಕ್ರಮಗಳನ್ನು ಘೋಷಿಸಿದೆ.

2025ನೇ ಸಾಲಿನ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಪಾಲನೆ ದೃಷ್ಟಿಯಿಂದ ನೀಡಲಾದ ಸೂಚನೆಗಳು :-

  1. ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಸಂಬಂಧಪಟ್ಟ ಪೊಲೀಸ್ ಠಾಣೆ/ಹೆಸ್ಕಾಂ ಕಛೇರಿ/ಅಗ್ನಿ ಶಾಮಕ ಠಾಣೆ/ಗ್ರಾಮ ಪಂಚಾಯತ್/ ಪಟ್ಟಣ ಪಂಚಾಯತ್ ಇನ್ನಿತರ ಸಂಬಂಧಪಟ್ಟ ಇಲಾಖೆಗಳಿಂದ ತಪ್ಪದೇ ಅನುಮತಿಯನ್ನು ಪಡೆದುಕೊಳ್ಳುವುದು.
  2. ಗಣೇಶ ಪ್ರತಿಷ್ಠಾಪನೆಯ ಮಂಟಪವನ್ನು ರಸ್ತೆ ಸಂಚಾರಕ್ಕೆ ಅಡಚಣೆಯಾಗುವಂತೆ ಸಾರ್ವಜನಿಕ ರಸ್ತೆಯಲ್ಲಿ ಹಾಕತಕ್ಕದ್ದಲ್ಲ.
  3. ಗಣೇಶ ಮಂಟಪದಲ್ಲಿ ಅಗ್ನಿ ಅವಘಡಗಳಾಗದಂತೆ ಅಗತ್ಯ ಸುರಕ್ಷತಾ/ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಯಾವುದೇ ಆಕಸ್ಮಿಕ ಬೆಂಕಿಯನ್ನು ತುರ್ತಾಗಿ ನಂದಿಸಲು ಅನುಕೂಲವಾಗುವಂತೆ ನೀರಿನ ಬಕೆಟ್, ಮರಳು ಅಥವಾ ಇತರ ಅಗ್ನಿ ಶಾಮಕ ಸಾಧನಗಳನ್ನು ಇಟ್ಟುಕೊಳ್ಳುವುದು.

  1. ಗಣೇಶ ಮಂಟಪದಲ್ಲಿ ವಿದ್ಯುತ್ ಅವಘಡಗಳಾಗದಂತೆ ಉತ್ತಮ ಗುಣಮಟ್ಟದ ವಿದ್ಯುತ್ ವಯರ್ ಗಳನ್ನು ಬಳಸುವುದು ಹಾಗೂ ಹೆಸ್ಕಾಂ ಅಧಿಕಾರಿಗಳಿಂದ ಅಗತ್ಯ ಪರವಾನಿಗೆ ಪಡೆದುಕೊಳ್ಳುವುದು.
  2. ಗಣೇಶ ಮಂಟಪದಲ್ಲಿ ಹಗಲು ರಾತ್ರಿ ಎನ್ನದೇ ಸರದಿ ಪ್ರಕಾರ ನಿರಂತರವಾಗಿ ಕಾಯಲು ಜವಾಬ್ದಾರಿಯುತ ಸ್ವಯಂ ಸೇವಕರನ್ನು ತಪ್ಪದೇ ನೇಮಿಸುವುದು.
  3. ಗಣೇಶೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆಯಾಗುವವರೆಗೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಸೇವೆ ಸಲ್ಲಿಸುವುದು.
  4. ಗಣೇಶ ಮಂಟಪದಲ್ಲಿ ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಹೆಸರು, ಮೊಬೈಲ್ ನಂಬರ್ ಮಾಹಿತಿ ಹಾಗೂ ಪೊಲೀಸ್ ಠಾಣೆ/ ಅಗ್ನಿ ಶಾಮಕ ಠಾಣೆ/ ಹೆಸ್ಕಾಂ ಅಧಿಕಾರಿ/ಸಿಬ್ಬಂದಿ ಹಾಗೂ ಅಂಬುಲೆನ್ಸ್ ವಾಹನದ ದೂರವಾಣಿ ಸಂಖ್ಯೆ ಮಾಹಿತಿ ಇರುವ ಫಲಕವನ್ನು ಅಳವಡಿಸುವುದು.

  1. ಧ್ವನಿ ವರ್ಧಕ ಬಳಕೆಗೆ ಕಡ್ಡಾಯವಾಗಿ ಪರವಾನಿಗೆಯನ್ನು ಪಡೆದುಕೊಳ್ಳುವುದು. ಸಾರ್ವಜನಿಕರಿಗೆ ಕಿರಿ-ಕಿರಿಯಾಗುವಂತೆ ಧ್ವನಿ ವರ್ಧಕ ಬಳಸಕೂಡದು. ರಾತ್ರಿ 10:00 ಗಂಟೆಯಿಂದ ಬೆಳಿಗ್ಗೆ 06:00 ಗಂಟೆಯ ನಡುವಿನ ಅವಧಿಯಲ್ಲಿ ಧ್ವನಿ ವರ್ಧಕವನ್ನು ಬಳಸಕೂಡದು. ಧ್ವನಿವರ್ಧಕ ಬಳಕೆ ಸಮಯದಲ್ಲಿ ಸರ್ಕಾರವು ನಿಗದಿಪಡಿಸಿದ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ಧ ಬರುವಂತೆ ಧ್ವನಿ ವರ್ಧಕವನ್ನು ಬಳಸಕೂಡದು. ಇತರರ ಭಾವನೆಗೆ ಧಕ್ಕೆಯಾಗಬಹುದಾದ ಅಥವಾ ಪ್ರಚೋದನಾಕಾರಿಯಾದ ಯಾವುದೇ ಹಾಡು, ಭಾಷಣ ಇತ್ಯಾದಿಗಳನ್ನು ಬಳಸತಕ್ಕದ್ದಲ್ಲ.
  2. ಮನರಂಜನಾ ಕಾರ್ಯಕ್ರಮಗಳನ್ನು ಆಯೋಚಿಸಿದ್ದಲ್ಲಿ ಪೊಲೀಸ್ ಠಾಣೆಗೆ ಮುಂಚಿತವಾಗಿ ಮಾಹಿತಿ ನೀಡುವುದು. ಕಾರ್ಯಕ್ರಮಗಳಲ್ಲಿ ಯಾವುದೇ ಅಹಿತಕರ ಘಟನೆಗಳಾಗದಂತೆ ಸಮಿತಿಯ ಪದಾಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು ಕಾರ್ಯ ನಿರ್ವಹಿಸುವುದು.
  3. ಕಾರ್ಯಕ್ರಮದ ವೇಳೆ ಹಾಗೂ ಪ್ರತಿಷ್ಠಾಪನಾ ಮೆರವಣಿಗೆ ಹಾಗೂ ವಿಸರ್ಜನಾ ಮೆರವಣಿಗೆಯ ವೇಳೆ ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ನೋಡಿಕೊಳ್ಳುವುದು.
  4. ಪ್ರತಿಷ್ಠಾಪನಾ ಮೆರವಣಿಗೆ ಮಾರ್ಗ ಹಾಗೂ ವಿಸರ್ಜನಾ ಮೆರವಣಿಗೆ ಮಾರ್ಗವನ್ನು ಪೂರ್ವಾನುಮತಿಯಿಲ್ಲದೇ ಬದಲಾಯಿಸತಕ್ಕದ್ದಲ್ಲ.

 

  1. ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಘನ ಸರಕಾರ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು.
  2. ಗಣೇಶೋತ್ಸವ ಆಚರಣೆ ವೇಳೆ ಕಾನೂನು ಸುವ್ಯವಸ್ಥೆ ಪಾಲನೆ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಆರೋಗ್ಯ ಇಲಾಖೆ. ಸ್ಥಳೀಯ ಸಂಸ್ಥೆ, ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹಾ ತಪ್ಪದೇ ಪಾಲಿಸುವುದು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page