August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಳೆದುಕೊಂಡ ಹತ್ತು ಲಕ್ಷ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿದ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ರವರ ತಂಡ

ಆಗಸ್ಟ್ 08ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರವರ ಪತ್ನಿ ವಿಜಯರವರು ಕುಪ್ಪೆ ಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದರ್ಭ ಮಧ್ಯಾಹ್ನ 2:00 ಗಂಟೆಗೆ ಮೂಡಬಿದ್ರೆ ಪೇಟೆಯಲ್ಲಿ ಎರಡು ಬಳೆ ಮತ್ತು ಚಿನ್ನದ ಸರ ಒಟ್ಟು ಒಂಬತ್ತು ಪವನ್ ಚಿನ್ನ ಮತ್ತು ಪರ್ಸ್ ಸಮೇತ ಕಳೆದುಕೊಂಡಿರುತ್ತಾರೆ. ಈ ಬಗ್ಗೆ ಅದೇ ದಿನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.

ದೂರಿನ ಅನ್ವಯ ಪತ್ತೆ ಕಾರ್ಯದಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ.ರವರ ನೇತೃತ್ವದಲ್ಲಿ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ಮಹಮ್ಮದ್ ಹುಸೇನ್, ಮಹಮ್ಮದ್ ಇಕ್ಬಾಲ್, ಅಖಿಲ್ ಅಹಮದ್  ನಾಗರಾಜ ಲಮಾಣಿ ಮತ್ತು ವೆಂಕಟೇಶ್ ರವರು  ಎರಡು ದಿನಗಳಲ್ಲಿ ಪತ್ತೆಗೆ ಶ್ರಮಿಸಿ ಸದರಿ ಕಳೆದುಕೊಂಡ ಚಿನ್ನ ಮತ್ತು ಪರ್ಸ್ ನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸುತ್ತಾರೆ. ಚಿನ್ನದ ಮೌಲ್ಯ ಸುಮಾರು ರೂಪಾಯಿ 10 ಲಕ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಪ್ರಶಂಸೆಯನ್ನು ವ್ಯಕ್ತಪಡಿಸುತ್ತಾರೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page