July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಣೇಶ ಹಬ್ಬ, ಈದ್ ಮಿಲಾದ್ ಹಬ್ಬದ ವೇಳೆ DJ ನಿಷೇಧಿಸಿ – ಸರ್ಕಾರದ ಮಹತ್ವದ ಆದೇಶ

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ. ಆಗೋಸ್ಟ್ 27 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹೀಗಾಗಿ ಆಗಸ್ಟ್ 27ರಿಂದ ಸೆಪ್ಟೆಂಬರ್ 15ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಗಣೇಶ ಮೂರ್ತಿಗಳನ್ನು – ವಿಸರ್ಜನೆ ಮಾಡಲಿದ್ದಾರೆ.


ಅಲ್ಲದೇ ಸಪ್ಟೆಂಬರ್ 5 ರಿಂದ 10ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page